ಶುಕ್ರವಾರ, ಆಗಸ್ಟ್ 12, 2022
24 °C

ವಿದ್ಯುತ್‌ ಬಿಲ್, ನೀರಿನ ಕರ ಮನ್ನಾಕ್ಕೆ ಜೆಡಿಎಸ್ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಕೋವಿಡ್–19ನಿಂದ ಜನರು ಸಂಕಷ್ಟಕ್ಕೆ ಒಳಗಾಗಿರುವುದರಿಂದ ವಿದ್ಯುತ್‌ ಬಿಲ್ ಮತ್ತು ನೀರಿನ ಕರ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ನೇತೃತ್ವ ವಹಿಸಿದ್ದ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ, ‘ಲಾಕ್‌ಡೌನ್‌ನಿಂದಾಗಿ ಕೆಲಸವಿಲ್ಲದೆ ಹಾಗೂ ಗಳಿಕೆ ಇಲ್ಲದೆ ಕಂಗಾಲಾಗಿರುವ ಸಂದರ್ಭದಲ್ಲಿ ವಿದ್ಯುತ್‌ ಶುಲ್ಕ ಹೆಚ್ಚಿಸುವ ಮೂಲಕ ಸರ್ಕಾರವು ಜನರ ನೋವಿನ ಮೇಲೆ ಬರೆ ಎಳೆದಿದೆ. ನೆರವಿಗೆ ಬರುವ ಬದಲಿಗೆ ಸಂಕಟ ನೀಡುತ್ತಿದೆ’ ಎಂದು ಆರೋಪಿಸಿದರು.

‘ಕಬ್ಬಿಣದ ದರವನ್ನು ಇಳಿಸಬೇಕು. ಪ್ರತಿ ರೈತ ಕುಟುಂಬಕ್ಕೆ ₹ 10ಸಾವಿರ ಆರ್ಥಿಕ ನೆರವು ನೀಡಬೇಕು. ಕೋವಿಡ್–19ನಿಂದ ಮೃತರಾದವರ ಪ್ರತಿ ಕುಟುಂಬದವರಿಗೆ ₹ 10 ಲಕ್ಷ ಪರಿಹಾರ ಕೊಡಬೇಕು. ಇಲ್ಲವಾದಲ್ಲಿ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು