ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಗವಾಡ: ದಂಪತಿಗೆ ಚಾಕು ಇರಿದು ಚಿನ್ನಾಭರಣ ದರೋಡೆ

Published 5 ಜುಲೈ 2024, 14:39 IST
Last Updated 5 ಜುಲೈ 2024, 14:39 IST
ಅಕ್ಷರ ಗಾತ್ರ

ಕಾಗವಾಡ: ತಾಲ್ಲೂಕಿನ ಶೇಡಬಾಳ ಸ್ಟೇಶನ್‌ನಲ್ಲಿ ಮನೆಗೆ ನುಗ್ಗಿದ ಕಳ್ಳರು, ದಂಪತಿಗೆ ಚಾಕು ಇರಿದು, ಸುಮಾರು 10 ಗ್ರಾಮ ಚಿನ್ನ ಮತ್ತು ₹ 20 ಸಾವಿರ ನಗದು ದೋಚಿಕೊಂಡು ಪರಾರಿಯಾಗಿರುವ ಘಟನೆ ನಿನ್ನೆ ತಡ ರಾತ್ರಿ ನಡೆದಿದೆ.

ಶೇಡಬಾಳ ರೈಲು ನಿಲ್ದಾಣದ ಹೊರವಲಯದ ಯಮನಪ್ಪಾ ಸಂಕಪಾಳ ಮನೆ ಸೇರಿದಂತೆ ಸುತ್ತಮುತ್ತಲಿನ ನಾಲ್ಕು ಮನೆಗಳಿಗೆ ನುಗ್ಗಿದ ಖದೀಮರು ಕಳ್ಳತನ ಮಾಡಿದ್ದಾರೆ. ಕಳ್ಳತನ ಮಾಡುವಾಗ ಯಮನಪ್ಪ ಸಂಕಪಾಳ ಮತ್ತು ಆತನ ಪತ್ನಿ ಸಾವುಬಾಯಿ ಸಂಕಪಾಳ ಅಡ್ಡಿ ಪಡಿಸಿದ್ದಕ್ಕೆ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಪರಾರಿಯಾಗಿದ್ದಾರೆ.

ಗಾಯಗೊಂಡ ದಂಪತಿಯನ್ನು ಮಹಾರಾಷ್ಟ್ರದ ಮಿರಜ ಖಾಸಗಿ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಗಾವಿ ಹೆಚ್ಚುವರಿ ಎಸ್‌ಪಿ ಶೃತಿ ಎನ್.ಎಸ್, ಡಿವೈಎಸ್‌ಪಿ ಬಾಲಕೃಷ್ಣಾ ಗೌಡರ, ಅಥಣಿ ಸಿಪಿಐ ರವೀಂದ್ರ ನಾಯ್ಕೋಡಿ ಕಾಗವಾಡ ಅಪರಾದ ವಿಭಾಗದ ಪಿಎಸ್‌ಐ ಸುರೇಶ ಮಂಟೂರ ಸೇರಿದಂತೆ ಸಿಬ್ಬಂದಿ  ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ. ಕಾಗವಾಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT