ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | ಜೆಜೆಎಂ ಯೋಜನೆ ಅನುಷ್ಠಾನ ಪರಿಣಾಮಕಾರಿಯಾಗಿರಲಿ: ಎಲ್ ಅತೀಕ್‌

Last Updated 3 ಡಿಸೆಂಬರ್ 2022, 8:30 IST
ಅಕ್ಷರ ಗಾತ್ರ

ಬೆಳಗಾವಿ: ‘ಜಲಜೀವನ ಮಿಷನ್‌ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಎಲ್ಲ ಕಾಮಗಾರಿಗಳಿಗೆ ವೇಗ ನೀಡಬೇಕು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೂಚಿಸಿದರು.

ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಸ್ವಚ್ಛ ಭಾರತ ಮಿಷನ್ ಹಾಗೂ ಜಲಜೀವನ ಮಿಷನ್ ಯೋಜನೆ ಕುರಿತು ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಪ್ರತಿ ಗ್ರಾಮಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಪ್ರಕ್ರಿಯೆ ಸಮರ್ಪಕವಾಗಿ ನಡೆಯಬೇಕು’ ಎಂದು ನಿರ್ದೇಶನ ನೀಡಿದರು.

ಬೆಳಗಾವಿ ವಿಭಾಗ ವ್ಯಾಪ್ತಿಯ ಜಿಲ್ಲೆಗಳಲ್ಲಿ ಈ ಯೋಜನೆಗಳಡಿ ಆಗಿರುವ ಪ್ರಗತಿ ಬಗ್ಗೆ ಪರಿಶೀಲಿಸಿದರು. ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ, ಮಲತ್ಯಾಜ್ಯ ನಿರ್ವಹಣೆ ಮತ್ತಿತರ ವಿಷಯಗಳ ಬಗ್ಗೆ ಚರ್ಚಿಸಿದರು.

ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ,ಗದಗ, ಹಾವೇರಿ, ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸ್ವಚ್ಛ ಭಾರತ ಮಿಷನ್ ಯೋಜನೆ ನೋಡಲ್ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT