ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಕರಿಗೆ ಉದ್ಯೋಗ ಸೃಷ್ಟಿ: ಜಗದೀಶ ಶೆಟ್ಟರ್

Published 1 ಮೇ 2024, 15:53 IST
Last Updated 1 ಮೇ 2024, 15:53 IST
ಅಕ್ಷರ ಗಾತ್ರ

ಕೌಜಲಗಿ: ‘ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಆದರೆ ಜಗದೀಶ್ ಶೆಟ್ಟರ್ ಅವರಿಗೆ ಮೋದಿ ಅವರು ಉನ್ನತ ಸ್ಥಾನ ನೀಡಲಿದ್ದಾರೆ. ಆಗ ಕೇಂದ್ರದ ಅನೇಕ ಯೋಜನೆಗಳನ್ನು, ಅನೇಕ ಮಹತ್ವದ ಕೆಲಸಗಳನ್ನು ನಮ್ಮ ಕ್ಷೇತ್ರಕ್ಕಾಗಿ ಮಾಡಿಸಬಹುದು. ಹಾಗಾಗಿ ಜಗದೀಶ ಶೆಟ್ಟರ್ ಅವರಿಗೆ ಮತ ನೀಡಿ’ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಪಟ್ಟಣದ ಬಸವೇಶ್ವರ ಪೇಟೆಯಲ್ಲಿ ಬುಧವಾರ ಲೋಕಸಭಾ ಚುನಾವಣೆ ಅಂಗವಾಗಿ ಅರಭಾವಿ ಮತಕ್ಷೇತ್ರದ ಮೆಳವಂಕಿ, ಕೌಜಲಗಿ ಗ್ರಾಮಗಳಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಿ, ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ಮತಯಾಚನೆ ಮಾಡಿ ಮಾತನಾಡಿದರು.

‘ಕಾಂಗ್ರೆಸ್ ಪಕ್ಷದವರು ಏನೇ ಹೇಳಿದರೂ ನೀವು ಬಿಜೆಪಿಗೆ ಮತ ನೀಡಬೇಕು. ಕೌಜಲಗಿ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಚುನಾವಣಾ ನಂತರ ಖಂಡಿತವಾಗಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’   ಎಂದರು.

ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಮಾತನಾಡಿ, ಯುವಕರಿಗೆ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುತ್ತೇವೆ. ಬೆಳಗಾವಿಯಲ್ಲಿ ಜವಳಿ ಪಾರ್ಕ್ ನಿರ್ಮಿಸುತ್ತೇನೆ. ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ಕೇಂದ್ರ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ ಅವರು, ನಮ್ಮ ಎನ್‌ಡಿಎ ಈಗಾಗಲೇ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ ಆದರೆ ಐಎನ್‌ಡಿಐಎ ಒಕ್ಕೂಟವು ಪ್ರಧಾನಿ ಅಭ್ಯರ್ಥಿಯನ್ನು ಏಕೆ ಘೋಷಿಸಿಲ್ಲ? ಸೋಲಿನ ಭೀತಿ ಆ ಪಕ್ಷವನ್ನು ಆವರಿಸಿದೆ’ ಎಂದು ಹೇಳಿದರು.

ವಿಧಾನ ಪರಿಷತ್  ಮಾಜಿ ಸದಸ್ಯ ಮಹಾಂತೇಶ್ ಕವಟಗಿಮಠ ಮಾತನಾಡಿ, ಕಳೆದ 10 ವರ್ಷದಲ್ಲಿ ನರೇಂದ್ರ ಮೋದಿ ಅವರು ವಿವಿಧ ಜನಪರ ಯೋಜನೆಗಳನ್ನು ನೀಡಿದ್ದಾರೆ. ಬೆಳಗಾವಿಯ 8 ವಿಧಾನ ಸಭಾ ಕ್ಷೇತ್ರದಲ್ಲಿ ಅರಭಾವಿ ವಿಧಾನ ಸಭಾ ಕ್ಷೇತ್ರದಲ್ಲಿ ಹೆಚ್ಚು ಲೀಡ್ ನೀಡಬೇಕು. ಜಗದೀಶ್ ಶೆಟ್ಟರ್ ಆಯ್ಕೆ ಮಾಡುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಾಯಕತ್ವವನ್ನು ಗಟ್ಟಿಗೊಳಿಸಬೇಕು’ ಎಂದರು.

ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಸ ಪಾಟೀಲ್, ಮಂಡಳ ಅಧ್ಯಕ್ಷ ಮಹಾದೇವ ಶೆಕ್ಕಿ, ಜೆಡಿಎಸ್ ಬ್ಲಾಕ್ ಅಧ್ಯಕ್ಷ ಪ್ರಕಾಶ ಕಾಳಶೆಟ್ಟಿ, ಮಹಾಂತೇಶ ಕುಡಚಿ, ಮುತ್ತೇಪ್ಪ ಮನ್ನಾಪೂರ ಸೇರಿದಂತೆ ಅರಭಾವಿ ಕ್ಷೇತ್ರದ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT