ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಕಾಕ: 90 ವಿದ್ಯಾರ್ಥಿಗಳಿಗೆ ನೇಮಕಾತಿ ಪತ್ರ

Published 1 ಜುಲೈ 2023, 7:57 IST
Last Updated 1 ಜುಲೈ 2023, 7:57 IST
ಅಕ್ಷರ ಗಾತ್ರ

ಗೋಕಾಕ: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಉಜ್ವಲ ಭವಿಷ್ಯಕ್ಕಾಗಿ ಕೆಎಲ್ಇ ಸಂಸ್ಥೆ ಶ್ರಮಿಸುತ್ತಿದೆ ಎಂದು ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿ ಹೇಳಿದರು.

ಶುಕ್ರವಾರ ನಗರದ ಕೆಎಲ್ ಐಟಿಐ ಕಾಲೇಜಿನಲ್ಲಿ ಬೆಂಗಳೂರಿನ ಇಂಪ್ಯಾಕ್ಟ್ ಸರ್ವೀಸ್‌ ಪ್ರೈವೇಟ್ ಲಿಮಿಟೆಡ್ ಹಾಗೂ ಹಿಟಾಚಿ ಮತ್ತು ಇನಕ್ಯಾಫ್ ತುಮಕೂರು ಆಶ್ರಯದೊಂದಿಗೆ ಐಟಿಐ ಪಾಸಾದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳನ್ನು ಸಂಸ್ಥೆ ಕಲ್ಪಿಸುತ್ತಿರುವ ಅವಕಾಶ ಸದುಪಯೋಗ ಪಡೆಸಿಕೊಂಡು ಇಂದಿನ ಸ್ವರ್ಧಾತ್ಮಕ ತಾಂತ್ರಿಕ ಯುಗಕ್ಕೆ ಸಿದ್ಧ್ದರಾಗಬೇಕು. ತಮ್ಮಲ್ಲಿರುವ ಕೌಶಲ ವೃದ್ಧಿಸಿಕೊಂಡು ಉದ್ಯೋಗಿಗಳಾಗಿ ತಮ್ಮ ಬದುಕು ರೂಪಿಕೊಳ್ಳುವಂತೆ ಸಲಹೆ ನೀಡಿದರು.

ಮೇಳದಲ್ಲಿ 90 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಕಂಪೆನಿಗಳ ಎಚ್.ಆರ್.ಗಳಾದ ಜಗದೀಶ್ವರ ಹಾಗೂ ಮುನು ಕೆ.ಜಿ., ಪ್ರಾಚಾರ್ಯ ಪದ್ಮಭೂಷಣ ಪಾಟೀಲ ಇದ್ದರು.

ಪ್ರಾಯೋಗಿಕ ಕಲಿಕೆಗೆ ಒತ್ತು ನೀಡಿ: ಸುಧಾಕರ್‌
‘ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಇಂದಿನ ಅಗತ್ಯಕ್ಕೆ ತಕ್ಕಂತೆ ಪಠ್ಯಕ್ರಮ ಬದಲಿಸುವ ಅಗತ್ಯವಿದೆ. ಪ್ರಾಯೋಗಿಕ ಕಲಿಕೆಗೆ ಒತ್ತು ನೀಡಬೇಕಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಹೇಳಿದರು. ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು)ದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ‘ತಾಂತ್ರಿಕ ವಿಭಾಗದ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್‌ ಕಲಿಕೆಗೆ ಹೆಚ್ಚಿನ ಅವಕಾಶ ಮಾಡಿಕೊಡಬೇಕು. ವಿದ್ಯಾರ್ಥಿಗಳು ಪದವೀಧರರಾಗುವ ಹೊತ್ತಿಗೆ ಔದ್ಯೋಗಿಕ ಕ್ಷೇತ್ರ  ಅಪೇಕ್ಷಿಸುವ ಕೌಶಲ ಬೆಳೆಸಿಕೊಂಡಿರಬೇಕು’ ಎಂದರು. ಇದೇವೇಳೆ ವಿಟಿಯು ಮೆಂಟರಿಂಗ್ ಪೋರ್ಟಲ್ ಉದ್ಘಾಟಿಸಿದರು. ವಿಟಿಯು ಕುಲಪತಿ ಪ್ರೊ.ಎಸ್‌.ವಿದ್ಯಾಶಂಕರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು.  ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ ವಿಟಿಯು ಹಣಕಾಸು ಅಧಿಕಾರಿ ಎಂ.ಎ.ಸಪ್ನಾ ಉಪಸ್ಥಿತರಿದ್ದರು. ಕುಲಸಚಿವ ಪ್ರೊ.ಬಿ.ಈ.ರಂಗಸ್ವಾಮಿ ಸ್ವಾಗತಿಸಿದರು. ಮೌಲ್ಯಮಾಪನ ಕುಲಸಚಿವ ಪ್ರೊ.ಟಿ.ಎನ್.ಶ್ರೀನಿವಾಸ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT