ಪರಮಾನಂದವಾಡಿ: ರಾಜಸ್ಥಾನದ ಜೋಧಪುರದಲ್ಲಿ 74ನೇ ಫೀಲ್ಡ್ ರೆಜಿಮೆಂಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಅಪಘಾತದಲ್ಲಿ ಸಾವನ್ನಪ್ಪಿದ ಗ್ರಾಮದ ವೀರಯೋಧ ಬಸವರಾಜ ಕಲ್ಮೇಶ್ವರ ವಾಳಕೆ (45) ಅವರ ಅಂತ್ಯಕ್ರಿಯೆ ಗುರುವಾರ ಮಿಲಿಟರಿ ಗೌರವಗಳೊಂದಿಗೆ ನೆರವೇರಿತು.

ಈಚೆಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಅವರನ್ನು ದೆಹಲಿಯ ಬೇಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಕೊನೆಯುಸಿರೆಳೆದರು. 23 ವರ್ಷಗಳಿಂದ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಯೋಧನಿಗೆ ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ.

ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸಿದಾಗ ಗ್ರಾಮಸ್ಥರಿಂದ ಮತ್ತು ನಿವೃತ್ತ ಯೋಧರು ಬರಮಾಡಿ ಕೊಂಡರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಶಾಲಾ ಮಕ್ಕಳು ರಸ್ತೆಯುದ್ದಕ್ಕೂ ಪುಷ್ಪವೃಷ್ಟಿ ಮಾಡಿ ಗೌರವ ಸಲ್ಲಿಸಿದರು.

ಭಾರತ ಮಾತಾ ಕಿ ಜೈ, ಬಸವರಾಜ ಅಮರ ರಹೆ, ಮತ್ತೆ ಹುಟ್ಟಿ ಬಾ ಎಂದು ಘೋಷಣೆಗಳು ಮೊಳಗಿದವು. ಗ್ರಾಮ ಪಂಚಾಯಿತಿ ಮತ್ತು ತಾಲ್ಲೂಕು ಆಡಳಿತದ ವತಿಯಿಂದ ಅಂತಿಮ ಗೌರವ ಸಲ್ಲಿಸಿದರು.

ಯೋಧನ ಗೌರವಾರ್ಥ ಗ್ರಾಮದಲ್ಲಿ ವ್ಯಾಪಾರ– ವಹಿವಾಟುಗಳನ್ನು ಸ್ವಯಂಪ್ರೇರಣೆಯಿಂದ ಬಂದ್ ಮಾಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-21-1533348062

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.