ಚಿಕ್ಕೋಡಿ: ‘ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಚಿಕ್ಕೋಡಿ ಶಾಖೆಯ ನೂತನ ಕಟ್ಟಡ ನಿರ್ಮಾಣಕ್ಕೆ ಕೊಲ್ಕತ್ತಾದ ರಾಜಾರಾಮ ಮೋಹನರಾಯ್ ಲೈಬ್ರರಿ ಫೌಂಡೇಷನ್‌ನಿಂದ ₹40 ಲಕ್ಷ ಅನುದಾನ ಮಂಜೂರಾಗಿದೆ‘ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದರು.

ಜಿಲ್ಲಾ ಕೇಂದ್ರ ಸಾರ್ವಜನಿಕ ಗ್ರಂಥಾಲಯ ಶಾಖೆಯ ನೂತನ ಕಟ್ಟಡ ನಿರ್ಮಾಣಕ್ಕೆ ಮಂಜೂರಾದ ₹40 ಲಕ್ಷ ಅನುದಾನದ ಅದೇಶದ ಪ್ರತಿಯನ್ನು ಚಿಕ್ಕೋಡಿ ಶಾಖಾ ಕೇಂದ್ರ ಗ್ರಂಥಾಲಯದ ಗ್ರಂಥಪಾಲಕ ವಸಂತ ಚಿತ್ರಗಾರ ಅವರಿಗೆ ಹಸ್ತಾಂತರಿಸಿ ಅವರು ಮಾತನಾಡಿದರು.

ಪ್ರಥಮ ಕಂತಾಗಿ ₹ 36 ಲಕ್ಷ ಬಿಡುಗಡೆಯಾಗಿದ್ದು, ಉಳಿದ ಹಣ ದ್ವಿತೀಯ ಕಂತಿನಲ್ಲಿ ಬಿಡುಗಡೆಗೊಳ್ಳಲಿದೆ ಎಂದರು.

ಪುರಸಭೆ ಸದಸ್ಯ ಜಗದೀಶ ಕವಟಗಿಮಠ, ಲೋಕೋಪಯೋಗಿ ಇಲಾಖೆಯ ಚಿಕ್ಕೋಡಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ವಿ.ಎನ್.ಪಾಟೀಲ, ನಿಪ್ಪಾಣಿ ನಗರಸಭೆ ಅಧ್ಯಕ್ಷ ಜಯವಂತ ಭಾಟಲೆ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಅಭಯ ಮಾನವಿ, ಬಿಜೆಪಿ ನಗರ ಅಧ್ಯಕ್ಷ ಪ್ರಣವ ಮಾನವಿ, ಅರುಣ ಕಾಶಿದಕರ, ಚಿಕ್ಕೋಡಿ ಶಾಖಾ ಕೇಂದ್ರ ಗ್ರಂಥಾಲಯದ ಗ್ರಂಥಪಾಲಕ ವಸಂತ ಚಿತ್ರಗಾರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.