ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Last Updated 21 ಅಕ್ಟೋಬರ್ 2020, 14:37 IST
ಅಕ್ಷರ ಗಾತ್ರ

ಬೆಳಗಾವಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿ ಹಮ್ಮಿಕೊಂಡಿದೆ.

2020-21ನೇ ಸಾಲಿನಲ್ಲಿ ಇಲಾಖೆಯ ಬೆಳಗಾವಿ ಜಿಲ್ಲಾ ಕಚೇರಿಯಲ್ಲಿ ಈ ಸಮಾಜದ ತಲಾ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಪ್ರತಿ ತಿಂಗಳು ₹ 15ಸಾವಿರ ಸ್ಟೈಫಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು. ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನವಿರಬೇಕು. ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. 40 ವರ್ಷದೊಳಗಿರಬೇಕು. ಹೆಚ್ಚಿನ ಮಾಹಿತಿಗೆ ಮೊ: 9480841233 ಅಥವಾ 9448589639 ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT