ಬೆಳಗಾವಿ: ‘ಪತ್ರಕರ್ತರ ಎರಡು ದಶಕಗಳ ಬೇಡಿಕೆಗಳನ್ನು ನಾನು ಈಡೇರಿಸಿದ್ದೇನೆ ಎಂದು ಎಲ್ಲರೂ ಹೇಳುತ್ತಾರೆ. ಆದರೆ, ಇದಕ್ಕೆ ಮುಖ್ಯಮಂತ್ರಿ ನನಗೆ ನೀಡಿದ ಶಕ್ತಿ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಹೋರಾಟ ಕಾರಣ’ ಎಂದು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.

ನಗರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಭಾನುವಾರ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

‘ನಿಮ್ಮೆಲ್ಲರ ಬೆಂಬಲದಿಂದ ಇಲ್ಲಿಯವರೆಗೂ ಹೆಜ್ಜೆ ಇಟ್ಟಿದ್ದೇನೆ. ಇನ್ನೂ ನಡೆಯಬೇಕಿರುವ ಹಾದಿ ದೊಡ್ಡದಿದೆ. ನನಗೆ ಸಿಕ್ಕ ಅವಕಾಶದಲ್ಲಿ ಪತ್ರಕರ್ತರ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ನಿರ್ಧರಿಸಿಯೇ ಕೆಲಸ ಮಾಡುತ್ತಿದ್ದೇನೆ’ ಎಂದರು.

ಸರ್ವೋತ್ತಮ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರ, ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ,
ಉಪಾಧ್ಯಕ್ಷ ಪುಂಡಲಿಕ ಬಾಳೋಜಿ, ಜಿಲ್ಲಾ ಘಟಕದ ಅಧ್ಯಕ್ಷ ದಿಲೀಪ ಕುರಂದವಾಡೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ, ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಎಚ್.ಬಿ.ಮದನಗೌಡ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.