ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ವಿವಿಧ ಬೇಡಿಕೆ ಈಡೇರಿಕೆಗೆ ಪತ್ರಕರ್ತರ ಮನವಿ

Last Updated 26 ಸೆಪ್ಟೆಂಬರ್ 2021, 15:42 IST
ಅಕ್ಷರ ಗಾತ್ರ

ಬೆಳಗಾವಿ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇಲ್ಲಿನ ಪತ್ರಕರ್ತರ ಸಂಘದವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.

‘ದಶಕಗಳಿಂದಲೂ ಬೆಳಗಾವಿ ಜಿಲ್ಲೆಯ ಪತ್ರಕರ್ತರು ಕಾರ್ಯದಕ್ಷತೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ. ಜಾಗತಿಕ ಬದಲಾವಣೆಯ ಪರಿಸ್ಥಿಯಲ್ಲಿ ಪತ್ರಕರ್ತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಕುರಿತು ಈಗಾಗಲೇ ಸಾಕಷ್ಟು ಬಾರಿ ಸರ್ಕಾರದ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿಲ್ಲ. ನಮ್ಮ ಸಮಸ್ಯೆಗಳಿಗೆ ಪರಿಹಾರವಾಗಿ ಸಹಾಯ, ಸೌಲಭ್ಯಗಳ ಅವಶ್ಯಕತೆ ಇದೆ. ಸಾಮಾಜಿಕ ನ್ಯಾಯ ಕಲ್ಪಿಸುವಲ್ಲಿ ಕ್ರಮ ವಹಿಸಬೇಕು’ ಎಂದು ಕೋರಿದರು.

‘ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾನ್ಯತೆ ಪಡೆದ ಪತ್ರಕರ್ತರು ಹಲವು ವರ್ಷಗಳಿಂದ ಉತ್ತಮ ಸಮಾಜ ನಿರ್ಮಾಣಕ್ಕೆ ಹಾಗೂ ಏಳಿಗಗೆ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಸ್ತಾಪಿತ ಬಡಾವಣೆಯಲ್ಲಿ ಅತ್ಯಂತ ಕನಿಷ್ಠ ಬೆಲೆಯಲ್ಲಿ ನಿವೇಶನ ಮೀಸಲಿಟ್ಟು, ಹಂಚಿಕೆ ಮಾಡಬೇಕು’.

‘ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ನಕಲಿ ಪತ್ರಕರ್ತರ ಹಾವಳಿ ಹೆಚ್ಚಿದೆ. ಅವರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಅಲ್ಲದೇ ಸರ್ಕಾರಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಬೆದರಿಕೆ ಹಾಕುವುದು, ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ, ನೈತಿಕವಾಗಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ಮುಜುಗರ ಆಗುತ್ತಿದೆ. ಮಾಧ್ಯಮ ಕ್ಷೇತ್ರವು ಸಮಾಜದ ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತಿದೆ. ಆದ್ದರಿಂದ ಸರ್ಕಾರದಿಂದ ಮಾನ್ಯತೆ ಪಡೆದ ಮಾಧ್ಯಮ ಸಂಸ್ಥೆಗಳ ಸಿಬ್ಬಂದಿ ಹೊರತುಪಡಿಸಿ, ಪತ್ರಕರ್ತರು ಎಂದು ಹೇಳಿಕೊಂಡು ಓಡಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಕಾರ್ಯನಿರತ ಪತ್ರಕರ್ತರು ಅಪಘಾತದಿಂದ ಅಥವಾ ಅಕಾಲಿಕವಾಗಿ ಮರಣ ಹೊಂದಿದ್ದಲ್ಲಿ ಅವರ ಅವಲಂಬಿತ ಕುಟುಂಬಕ್ಕೆ ಕನಿಷ್ಠ ₹ 25 ಲಕ್ಷ ಪರಿಹಾರ ನೀಡಬೇಕು. ಅಂಗವೈಕಲ್ಯ ಹೊಂದಿದ್ದಲ್ಲಿ ಕನಿಷ್ಠ ₹ 10 ಲಕ್ಷ ಪರಿಹಾರ ಕಲ್ಪಿಸಬೇಕು. ಪತ್ರಕರ್ತರ ಪ್ರತಿಭಾವಂತ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಧನಸಹಾಯ ಮಾಡಬೇಕು’ ಎಂದು ಕೋರಿದರು.

ಬೆಳಗಾವಿ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀಶೈಲ ಮಠದ, ಉಪಾಧ್ಯಕ್ಷ ಮಹೇಶ ವಿಜಾಪುರ, ಕಾರ್ಯದರ್ಶಿ ಸುರೇಶ್ ನೇರ್ಲಿ, ಖಜಾಂಚಿ ಮಂಜುನಾಥ ಕೋಳಿಗುಡ್ಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT