ಧಾರವಾಡ/ಬೆಳಗಾವಿ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಸೋಮವಾರ ಆದೇಶಿಸಿದೆ.

ಆರೋಪಿಯನ್ನು ಸುಳ್ಳುಪತ್ತೆ ಪರೀಕ್ಷೆಗೆ ಒಳಪಡಿಸಲು ಅನುಮತಿ ನೀಡಬೇಕು ಎಂದು ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತು. ಆದರೆ ಮತ್ತೊಮ್ಮೆ ತಮ್ಮ ವಶಕ್ಕೆ ನೀಡುವಂತೆ ಸಿಬಿಐ ಮನವಿ ಸಲ್ಲಿಸಲಿಲ್ಲ. ಹೀಗಾಗಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಎಚ್. ಪಂಚಾಕ್ಷರಿ ಆದೇಶಿಸಿದರು. ನ್ಯಾಯಾಲಯದ ಹೊರಗೆ ಬೆಂಬಲಿಗರು ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದರಿಂದ ವಿನಯ ಅವರನ್ನು ಬೆಳಿಗ್ಗೆ 11ಕ್ಕೆ ಬದಲು ಮಧ್ಯಾಹ್ನ 12.30ಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು.

ಸುರಕ್ಷತೆ ಕಾರಣಕ್ಕಾಗಿ ನ್ಯಾಯಾಂಗ ಬಂಧನದ ಅವಧಿಯಲ್ಲಿ ವಿನಯ ಅವರನ್ನು ಬೆಳಗಾವಿ ಹೊರವಲಯದಲ್ಲಿರುವ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಯಿತು. ಜೈಲಿನೊಳಗೆ ಹೋಗುವ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ವಿನಯ ನಿರಾಕರಿಸಿದರು.

‘ಸಾಮಾನ್ಯ ಕೋಣೆಯಲ್ಲಿ ಅವರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಕೋವಿಡ್–19 ಕಾರಣಕ್ಕಾಗಿ ಯಾರ ಭೇಟಿಗೂ ಅವಕಾಶವಿರುವು
ದಿಲ್ಲ’ ಎಂದು ಜೈಲಿನ ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.