ಬುಧವಾರ, ಆಗಸ್ಟ್ 17, 2022
26 °C

ಜ್ಯೋತಿ ಇಂಗ್ಲಿಷ್ ಶಾಲೆಯಲ್ಲಿ ಸಿಬಿಎಸ್‌ಇಗೆ ಮಾನ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಇಲ್ಲಿನ ದಕ್ಷಿಣ ಮಹಾರಾಷ್ಟ್ರ ಶಿಕ್ಷಣ (ಡಿಎಂಎಸ್) ಮಂಡಳ ಸಂಸ್ಥೆಯ ಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಗೆ ಸಿಬಿಎಸ್‍ಇ ಮಾನ್ಯತೆ ಸಿಕ್ಕಿದೆ’ ಎಂದು ಮಂಡಳದ ಉಪಾಧ್ಯಕ್ಷ ರಾಜಾಭಾವು ಪಾಟೀಲ ತಿಳಿಸಿದರು.

ಇಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಲ್ಲಾ ಅತ್ಯಾಧುನಿಕ ಸೌಕರ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಈ ಶಾಲೆಯ ಸಾಧನೆ ಗಮನಿಸಿ, ನ. 26ರಂದು ಸಿಬಿಎಸ್‍ಇಯಿಂದ ಮಾನ್ಯತೆ ಸಿಕ್ಕಿದೆ’ ಎಂದು ಮಾಹಿತಿ ನೀಡಿದರು.

‘ಡಿಎಂಎಸ್ ಮಂಡಳದ ಅಡಿಯಲ್ಲಿ ಈಗಾಗಲೇ 45 ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಬಡವರು, ಶಿಕ್ಷಣ ವಂಚಿತರನ್ನು ದೃಷ್ಟಿಯಲ್ಲಿಟ್ಟುಕೊಂಡು 2010ರಲ್ಲಿ ಆರಂಭಿಸಲಾದ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಪ್ರಸ್ತುತ 183 ಬಾಲಕಿಯರು, 325 ಬಾಲಕರು ಸೇರಿ 508 ವಿದ್ಯಾರ್ಥಿಗಳು ಇದ್ದಾರೆ. ಅರ್ಪಣಾ ಮನೋಭಾವದ ಶಿಕ್ಷಕರು ಹಾಗೂ ಸಿಬ್ಬಂದಿಯುಳ್ಳ ಈ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತದೆ ಎಂಬ ಭರವಸೆ ಪಾಲಕರಲ್ಲೂ ಬಂದಿದೆ’ ಎಂದರು.

‘ಅತ್ಯಾಧುನಿಕ ತರಬೇತಿ ಕೊಠಡಿಗಳು, ರಸಾಯನವಿಜ್ಞಾನ, ಭೌತವಿಜ್ಞಾನ, ಜೀವವಿಜ್ಞಾನ, ಗಣಿತ ಮತ್ತು ಕಂಪ್ಯೂಟರ್ ವಿಷಯಗಳಿಗೆ ಸಂಬಂಧಿಸಿದ ಸುಸಜ್ಜಿತ ಪ್ರಯೋಗಾಲಯಗಳಿವೆ. ಅಗತ್ಯ ಸೌಲಭ್ಯಗಳನ್ನು ಹೊಂದಿರುವ ಕ್ರೀಡಾ ಕೊಠಡಿ ಹಾಗೂ ಮೈದಾನವಿದೆ. ಸಿಬಿಎಸ್‌ಇ ನಿಯಮಾವಳಿಗೆ ತಕ್ಕಂತೆ ಸೌಲಭ್ಯಗಳನ್ನು ಒದಗಿಸಲಾಗಿದೆ’ ಎಂದು ಹೇಳಿದರು.

‘ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ವೃದ್ಧಿಗೆ ಈಗಾಗಲೇ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಕೇಂದ್ರ ಸರ್ಕಾರವು ರೂಪಿಸಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದಾಗ, ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ವ್ಯವಸ್ಥೆ ಒದಗಿಸಲಾಗುವುದು’ ಎಂದು ಪ್ರತಿಕ್ರಿಯಿಸಿದರು.

ಕಾರ್ಯದರ್ಶಿ ಸುಭಾಷ್ ಓವುಳಕರ, ಸಹ ಕಾರ್ಯದರ್ಶಿ ಪ್ರೊ.ವಿಕ್ರಮ ಪಾಟೀಲ, ಖಜಾಂಚಿ ಎನ್.ಬಿ. ಖಾಂಡೇಕರ, ಜ್ಯೋತಿ ಸೆಂಟ್ರಲ್ ಶಾಲೆ ಅಧ್ಯಕ್ಷ   ಪಿ.ಡಿ. ಕಾಳೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು