ಮಂಗಳವಾರ, ಸೆಪ್ಟೆಂಬರ್ 21, 2021
28 °C

ಮಹಾನಗರ ಪಾಲಿಕೆಗಳಿಗೆ ಈಗ ಚುನಾವಣೆ ನಡೆಸುವ ಅಗತ್ಯವೇನಿದೆ?: ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಕೋವಿಡ್ 3ನೇ ಅಲೆಯ ಭೀತಿಯ ನಡುವೆ ಮಹಾನಗರಪಾಲಿಕೆಗಳಿಗೆ ಚುನಾವಣೆ ನಡೆಸುವ ಅಗತ್ಯತೆವೇನಿದೆ?’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್. ಈಶ್ವರಪ್ಪ ಕೇಳಿದರು.

ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಡಿಸೆಂಬರ್‌ವರೆಗೂ ಯಾವುದೇ ಚುನಾವಣೆ ನಡೆಸದಿರಲು ಸಚಿವ ಸಂಪಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಜಾಗ್ರತೆ ವಹಿಸಬೇಕು ಎಂದು ಪ್ರಧಾನಿ ಹೇಳುತ್ತಿದ್ದಾರೆ. ನ್ಯಾಯಾಲಯಗಳೂ ತಿಳಿಸುತ್ತಿವೆ. ಹೀಗಿರುವಾಗ ಆಯೋಗ ಚುನಾವಣೆಗೆ ಘೋಷಿಸಿದರೆ ಯಾರಿಗೆ ಕೇಳೋಣ?’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ರಾಜಕೀಯ ಪಕ್ಷವಾಗಿ ಚುನಾವಣೆ ಎದುರಿಸಲು ಸಿದ್ಧವಿದ್ದೇವೆ. ಆದರೆ, ಈಗಲೇ ನಡೆಸುವ ತುರ್ತೇನಿದೆ?’ ಎಂದು ಕೇಳಿದರು.

‘ತಾಲ್ಲೂಕು ಪಂಚಾಯ್ತಿಗಳನ್ನು ರದ್ದುಪಡಿಸಲು ಬರುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು