ಬೆಳಗಾವಿ: ‘ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ’ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ)ಯಿಂದ ಮುಖಂಡರು ಹಾಗೂ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

‘ರಾಜ್ಯದಲ್ಲಿ ಅರ್ಹರೆಲ್ಲರಿಗೂ ಜೂನ್ ಅಂತ್ಯದೊಳಗೆ ಮೊದಲನೇ ಡೋಸ್ ಕೋವಿಡ್ ಲಸಿಕೆ ಮತ್ತು ಸೆಪ್ಟೆಂಬರ್ ಅಂತ್ಯದೊಳಗೆ ಎರಡನೇ ಡೋಸ್ ಉಚಿತವಾಗಿ ನೀಡಬೇಕು. ಅಲ್ಲಲ್ಲಿ ಲಸಿಕೆ ಬೂತ್ಗಳನ್ನು ಸ್ಥಾಪಿಸಿ ಜನರನ್ನು ಕಾಯಿಸದೆ, ಸತಾಯಿಸದೆ ಲಸಿಕೆ ನೀಡಬೇಕು ಎನ್ನುವುದು ವೇದಿಕೆಯ ಹಕ್ಕೊತ್ತಾಯವಾಗಿದೆ’ ಎಂದು ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ತಿಳಿಸಿದರು.

ರಾಜ್ಯ ಸಂಚಾಲಕ ಮಹಾದೇವ ತಳವಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.