ಐನಾಪುರ: ಅಂಗವಿಕಲರಿಗೆ ಕಬಡ್ಡಿ ಟೂರ್ನಿ

ಗುರುವಾರ , ಜೂನ್ 27, 2019
30 °C

ಐನಾಪುರ: ಅಂಗವಿಕಲರಿಗೆ ಕಬಡ್ಡಿ ಟೂರ್ನಿ

Published:
Updated:

ಅಥಣಿ: ‘ಉತ್ತರ ಕರ್ನಾಟಕದಲ್ಲಿ ಇದೇ ಪ್ರಥಮ ಬಾರಿಗೆ ಅಂಗವಿಕಲರಿಗಾಗಿ ರಾಜ್ಯ ಮಟ್ಟದ ಮುಕ್ತ ಕಬಡ್ಡಿ ಟೂರ್ನಿಯನ್ನು  ಜೂನ್ 30ರಂದು ತಾಲ್ಲೂಕಿನ ಐನಾಪುರ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ಆಯೋಜಿಸಲಾಗಿದೆ’ ಎಂದು ಐನಾಪುರ ಜನಧ್ವನಿ ವೇದಿಕೆ ಮುಖ್ಯಸ್ಥ ರಮೇಶ ನಾಯಿಕ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಅಂಗವಿಕಲರು ದೈಹಿಕವಾಗಿ ವಿಕಲಾಂಗರಾಗಿದ್ದರೂ ಮಾನಸಿಕವಾಗಿ ಸದೃಢವಿರುತ್ತಾರೆ. ಅವರಲ್ಲಿ ಒಂದಿಲ್ಲೊಂದು ಪ್ರತಿಭೆ ಇರುತ್ತದೆ. ಅವರು ಕೂಡ ಇತರರಂತೆ ಕ್ರೀಡೆಗಳಲ್ಲಿ ಭಾಗವಹಿಸುವ ಮನೋಭಾವ ಹೊಂದಲಿ ಎಂಬ ಉದ್ದೇಶದಿಂದ ಟೂರ್ನಿ ನಡೆಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

‘ಪ್ರಥಮ ಬಹುಮಾನವಾಗಿ ₹ 15ಸಾವಿರ, ದ್ವಿತೀಯ ₹ 10ಸಾವಿರ ಹಾಗೂ ತೃತೀಯ ₹ 7ಸಾವಿರ ಬಹುಮಾನದೊಂದಿಗೆ ಟ್ರೋಫಿಗಳನ್ನು ನೀಡಲಾಗುವುದು. 18 ವರ್ಷ ಮೇಲ್ಪಟ್ಟವರು ಜೂನ್ 25ರ ಒಳಗೆ ಹೆಸರು ನೋಂದಾಯಿಸಬೇಕು. ಪ್ರವೇಶ ಶುಲ್ಕ ಇರುವುದಿಲ್ಲ. ಗಾಲಿ ಕುರ್ಚಿ ಬಳಸಲು ಅವಕಾಶವಿರುವುದಿಲ್ಲ’ ಎಂದು ತಿಳಿಸಿದರು. ಆಸಕ್ತರು ಹೆಚ್ಚಿನ ಮಾಹಿತಿಗೆ ಮೊ: 7022850565 ಸಂಪರ್ಕಿಸಬಹುದು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !