ಕಾಗವಾಡ: ಮಹಾರಾಷ್ಟ್ರದ ಪಶ್ಚಿಮ ಘಟ್ಟದ ಕೊಂಕಣ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ ಜಲಾನಯನ ಪ್ರದೇಶದ ಕೊಯ್ನಾ, ನವಜಾದಲ್ಲಿ ಮಳೆ ಹೆಚ್ಚಾಗಿದೆ.

ಮಹಾಬಳೇಶ್ವರದಲ್ಲಿ 8.7 ಸೆಂ.ಮೀ ಮಳೆ ದಾಖಲಾಗಿದೆ. ಕೃಷ್ಣಾ ನದಿಯ ನೀರಿನ ಮಟ್ಟ ಏರಿಕೆ ಆಗಿದ್ದು ಬಾಗಲಕೋಟ ಜಿಲ್ಲೆಯಿಂದ ಮಹಾರಾಷ್ಟ್ರ ರಾಜ್ಯಕ್ಕೆ ಸಂಪರ್ಕಿಸುವ ಉಗಾರ-ಕುಡಚಿ ಸೇತುವೆ ಸಂಪೂರ್ಣ ಜಲಾವೃತ ಆಗಿರುವದರಿಂದ ಎರಡು ಕಡೆಗಳಿಂದ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ.

ಮಹಾರಾಷ್ಟ್ರ ರಾಜ್ಯದ ಕೋಯ್ನಾ ಅಣೆಕಟ್ಟು ಒಂದು ನೂರಾ ಐದು ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು ಅಣೆಕಟ್ಟೆಯಲ್ಲಿ 85.44 ಟಿಎಂಸಿ ನೀರು ಸಂಗ್ರಹವಾಗಿದ್ದು ಕೃಷ್ಣಾ ಹಾಗೂ ಉಪನದಿಗಳ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿಯ ಮಹಾರಾಷ್ಟ್ರದ ಅಣೆಕಟ್ಟೆಗಳು ಬಹುತೇಕ ಭರ್ತಿಯಾಗಿವೆ. ಯಾವಾಗ ಬೇಕಾದರೂ ಹೆಚ್ಚಿನ ಪ್ರಮಾಣದ ನೀರನ್ನು ಬಿಡುವ ಸಾಧ್ಯತೆಗಳು ಇರುವುದರಿಂದ ಜಿಲ್ಲಾಡಳಿತ ನದಿ ತೀರದಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಮಂಗಳವಾರ ಬೆಳಿಗ್ಗೆ 8ಗಂಟೆಗೆ ಕುಡಚಿ ಸೇತುವೆ ಜಲಾವೃತಗೊಂಡಿದ್ದು, ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಸಾರ್ವಜನಿಕರು ಸೇತುವೆ ಹಾಗೂ ನದಿ ಹತ್ತಿರ ಸುಳಿಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕಾಗವಾಡ ಪೊಲೀಸ್ ಠಾಣೆ ಸಿಬ್ಬಂದಿ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡುವ ಮೂಲಕ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಸೇತುವೆ ಜಲಾವೃತಗೊಂಡ ಮಾಹಿತಿ ದೊರಕದ ಪ್ರಯಾಣಿಕರು ಮರುಳಿ ಪರ್ಯಾಯ ಮಾರ್ಗದ ಮೂಲಕ ಸಂಚಾರ ಮಾಡಬೇಕಾಗಿದೆ. ಇನ್ನು ಈ ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರು ರೈಲು ಮಾರ್ಗ ಅವಲಂಬಿಸಬೇಕು. ಅಂಕಲಿ-ಮಾಂಜರಿ ಮಾರ್ಗವಾಗಿ ಅಥವಾ ದರೂರ-ಅಥಣಿ ಮಾರ್ಗವಾಗಿ ಸಂಚರಿಸಬೇಕಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.