ಕಾಗವಾಡ: ತಾಲ್ಲೂಕಿನ ಕೃಷ್ಣಾ ನದಿ ತೀರದ ಕಾತ್ರಾಳ ಗ್ರಾಮದ ದುರ್ಗಾಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವ ಎರಡು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಅದ್ದೂರಿಯಾಗಿ ನಡೆಯಿತು.

ಗುರುವಾರ ಅಗಸಿ ಬಾಗಿಲ ಪೂಜೆ, 150 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ಶುಕ್ರವಾರ ಬೆಳಿಗ್ಗೆ ಮಹಾ ಪೂಜೆ ನಡೆಯಿತು. ನಂತರ ಸಕಲ ವಾದ್ಯ ಮೇಳಗಳೊಂದಿಗೆ ದೇವಿಯ ಪಲ್ಲಕ್ಕಿಯನ್ನು ನದಿಯ ಪೂಜಾ ಕಾರ್ಯಕ್ಕೆ ಕೊಂಡೊಯ್ದ ಅಲ್ಲಿ ನದಿಯ ಪೂಜೆ ಮುಗಿಸಿ ಪಲ್ಲಕ್ಕಿ ಮೂಲಕ ದೇವಿಯ ಮೂರ್ತಿಯನ್ನು ದೇವಸ್ಥಾನಕ್ಕೆ ತಂದು ಐದು ಸುತ್ತು ದೇವಸ್ಥಾನ ಪ್ರದಕ್ಷಿಣೆ ಹಾಕಲಾಯಿತು. ನಂತರ ಪೂಜೆ, ನೈವೇದ್ಯ ಸಮರ್ಪಣೆ ಮಾಡಲಾಯಿತು. ಜಾತ್ರೆಗೆ ಬಂದ ಭಕ್ತರಿಗೆ ಮಹಾ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ವಿವಿಧ ಡೊಳ್ಳಿನ ಕಲಾ ತಂಡಗಳಿಂದ ಡೊಳ್ಳಿನ ಹಾಡುಗಳ ಕಾರ್ಯಕ್ರಮ ನಡೆಯಿತು.

ಭಕ್ತ ಮಹಾಂತೇಶ ಮಾತನಾಡಿ, ‘ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯದ ಸಾವಿರಾರು ಭಕ್ತರು ಬಂದು ದೇವಿಯ ದರ್ಶನ ಪಡೆಯುತ್ತಾರೆ ಪ್ರತಿ ವರ್ಷ ಜಾತ್ರೆಯ ಸಮಯದಲ್ಲಿ ದೇವರ ನುಡಿ ಕಾರ್ಯಕ್ರಮ ನಡೆಯುತ್ತದೆ’ ಎಂದರು. ನಿವೃತ್ತ ಡಿವೈಎಸ್ಪಿ ಮಲ್ಲಪ್ಪ ಮುದವಿ ಸೇರಿದಂತೆ ಹಲವು ಗ್ರಾಮಗಳ ಸಾವಿರಾರು ಭಕ್ತರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-21-1942747792

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.