ಕಾಗವಾಡ: ಮತ ಕ್ಷೇತ್ರದ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಗಾಳಿ ಮಳೆ ಅಪಾರ ಅವಾಂತರ ಮಾಡಿದೆ. ಸಂಬರಗಿ, ನಾಗನೂರ, ತಾವಂಶಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಹಾನಿಯಾಗಿದೆ.

ಭಾರಿ ಗಾಳಿಯ ಅಬ್ಬರಕ್ಕೆ 30ಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿಗಳು ಹಾರಿಹೋಗಿದ್ದು, ಹಲವಾರು ಕುಟುಂಬಗಳು ರಾತ್ರಿಯಿಡೀ ಆತಂಕದಲ್ಲಿ ಕಾಲ ಕಳೆದಿವೆ. ಮನೆಗಳ ಮೇಲ್ಛಾವಣಿ ಕುಸಿದು ಯುವಕನ ಕೈಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಳಿ ರಭಸಕ್ಕೆ ಜಾನುವಾರುಗಳ ಮೇಲೂ ಶಿಟ್ಗಳು ಬಿದ್ದು ಗಾಯಗಳಾಗಿವೆ. ನೂರಾರು ಬೃಹತ್ ಮರಗಳು, ತೆಂಗಿನ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗೆ ಉರುಳಿದ್ದು, ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಇನ್ನೊಂದೆಡೆ ದಾಳಿಂಬೆ, ಮಾವು ಸೇರಿದಂತೆ ಹಲವು ಬೆಳೆಗಳು ನೆಲಕಚ್ಚಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಕಾಲಿಕ ಗಾಳಿ ಮಳೆಯಿಂದ ಗ್ರಾಮಗಳಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕಾಗವಾಡ ವರದಿ:ಕಾಗವಾಡ ಪಟ್ಟಣದಲ್ಲಿ ಜೋರಾಗಿ ಬೀಸಿದ ಗಾಳಿ ಮಳೆಗೆ ನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಹಾರಿಹೋಗಿದೆ. ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ಜೂಗುಳ ಗ್ರಾಮದಲ್ಲಿ ಬೃಹದಾಕಾರದ ಮರ ಜೂಗುಳ-ಶಿರಗುಪ್ಪಿ ರಸ್ತೆಯಲ್ಲಿ ವಾಲಿದ್ದರಿಂದ ಕೆಲ ಕಾಲ ಸಂಚಾರಕ್ಕೆ ಅಡಚಣೆ ಆಯಿತು. ಬಿಸಿಲಿನ ಬೇಗೆಯಿಂದ ಕಂಗೆಂಟ್ಟಿದ್ದ ಜನರಿಗೆ ಅಕಾಲಿಕ ಮಳೆ ಗಾಳಿ ಬಹಳ ನಷ್ಟ ಉಂಟು ಮಾಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-21-1494390600

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.