ಕಾಗವಾಡ: ಉತ್ತರ ಕರ್ನಾಟಕದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ತಾಲ್ಲೂಕಿನ ಮಂಗಸೂಳಿ ಗ್ರಾಮದ ಮಲ್ಲಯ್ಯ (ಖಂಡೋಬಾ) ಜಾತ್ರೆಯು ಕರ್ನಾಟಕ ಮತ್ತು ಮಹಾರಾಷ್ಟ್ರದ ಲಕ್ಷಾಂತರ ಭಕ್ತರನ್ನು ಆಕರ್ಷಿಸುವ ಪ್ರಮುಖ ಧಾರ್ಮಿಕ ಹಬ್ಬವಾಗಿದ್ದು ಮಾರ್ಚ್ 26ರಿಂದ ಐದು ದಿನಗಳವರೆಗೆ ಜಾತ್ರೆ ಹಾಗೂ ದನಗಳ ಬೃಹತ್ ಜಾತ್ರೆ ನಡೆಯಲಿದೆ.

ಕಾಗವಾಡ ತಾಲ್ಲೂಕಿನ ಮಂಗಸೂಳಿ ಗ್ರಾಮದ ಮಲ್ಲಯ್ಯ ಶಿವನ ಅವತಾರವೆಂದು ನಂಬಲಾದ ಮಲ್ಲಯ್ಯನಿಗೆ ಇಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಭಂಡಾರ ಎರಚಿ, 'ಏಳುಕೋಟಿ' ಘೋಷಣೆಯೊಂದಿಗೆ ಜಾತ್ರೆ ನಡೆಯುತ್ತದೆ.

ಶನಿವಾರ ದೇವರಿಗೆ ನೈವೇದ್ಯ ಕಾರ್ಯಕ್ರಮ ನಡೆಯಲಿದ್ದು ಅದೇ ದಿನ ಸಂಜೆ ಸರಪಳಿ ಹರಿಯುವ ಕಾರ್ಯಕ್ರಮ ನಡೆಯಲಿದೆ. ಜಾತ್ರೆಯಲ್ಲಿ ಬಂದಿರುವ ಜಾತಿವಂತ ದನಗಳಿಗೆ ಸೋಮವಾರ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಣಾ ಕಾರ್ಯಾಕ್ರಮ ನಡೆಯಲಿದೆ ಎಂದು ಜಾತ್ರಾ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-21-754123010

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.