ಕಾಗವಾಡ: ‘ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಸಾಕಷ್ಟು ಅನುದಾನ ನೀಡುತ್ತಿದೆ. ಮತಕ್ಷೇತ್ರದಲ್ಲಿ ಈಗಾಗಲೇ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ’ ಎಂದು ಶಾಸಕ ರಾಜು ಕಾಗೆ ಹೇಳಿದರು.

ಮತ ಕ್ಷೇತ್ರದ ಜಂಬಗಿ ಗ್ರಾಮದಲ್ಲಿ ₹25 ಲಕ್ಷ ವೆಚ್ಚದ ಜಂಬಗಿ- ಶಿರೂರ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಭೂಮಿಪೂಜೆ ಸಲ್ಲಿಸಿ ಅವರು ಮಾತನಾಡಿ, ‘ಉತ್ತಮ ರಸ್ತೆ, ಕುಡಿಯುವ ನೀರು ಇನ್ನಿತರ ಮೂಲ ಸೌಲಭ್ಯಗಳನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದರು.

‘ಗ್ರಾಮೀಣ ಭಾಗದ ರಸ್ತೆಗಳು ಅಭಿವೃದ್ಧಿ ಆದರೆ ಮಾತ್ರ ರೈತರು ಬೆಳೆದ ಬೆಳೆ ಸಕಾಲಕ್ಕೆ ಮಾರುಕಟ್ಟೆ ತಲುಪಿ ರೈತರು ಅಭಿವೃದ್ಧಿ ಹೊಂದಲು ಸಾಧ್ಯ. ಆದ್ದರಿಂದ ಬರುವ ದಿನಗಳಲ್ಲಿ ಅಭಿವೃದ್ಧಿ ಕಾಣದ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದರು.

ವಿನಾಯಕ ಬಾಗಡೆ, ಪಂಚಾಯತ್ ರಾಜ್ ವಿಭಾಗದ ಎಇಇ ಈರಣ್ಣ ವಾಲಿ, ರವೀಂದ್ರ ವಾಗಮೋರೆ, ರಾಜೇಂದ್ರ ಪಾಟೀಲ, ಮೋಹನ ರಣಧೀರೆ, ಬಸವರಾಜ ಮಾಳಿ, ಯಶವಂತ ಪಾಟೀಲ, ಬಂಡು ಸೂರ್ಯವಂಶಿ, ಅನೀಕೇತ ಪಾಟೀಲ, ಶಿವಾನಂದ ಭೂವಿವಡ್ಡರ, ವೈ.ಆರ್. ಪಾಟೀಲ, ಪ್ರಕಾಶ ಜಾಧವ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.