ಬೆಳಗಾವಿ: ಇಲ್ಲಿನ ಕೆಎಲ್ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿಯು 2020–21ನೇ ಸಾಲಿನ ‘ಜಿಲ್ಲಾ ಹಸಿರು ಚಾಂಪಿಯನ್’ ಪ್ರಶಸ್ತಿಗೆ ಆಯ್ಕೆಯಾಗಿದೆ.

ಆನ್ಲೈನ್ನಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಪ್ರಶಸ್ತಿಯನ್ನು ಘೋಷಿಸಿದರು. ಸ್ವಚ್ಛತಾ ಕ್ರಿಯಾ ಯೋಜನೆ ಮತ್ತು ನೈರ್ಮಲ್ಯ, ತ್ಯಾಜ್ಯ, ನೀರು, ಇಂಧನ ಮತ್ತು ಹಸಿರು ನಿರ್ವಹಣೆ ಕ್ಷೇತ್ರಗಳಲ್ಲಿ ಉತ್ತಮ ಅಭ್ಯಾಸಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಈ ಪ್ರಶಸ್ತಿಯನ್ನು ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ, ಎಂ.ಜಿ.ಎನ್.ಸಿ.ಆರ್.ಇ, ಉನ್ನತ ಶಿಕ್ಷಣ ಇಲಾಖೆ ನಿರ್ದೇಶನದಂತೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಹೈದರಾಬಾದ್ನ ಎಂ.ಜಿ.ಎನ್.ಸಿ.ಆರ್.ಇ. ಸಂಯೋಜಕ ಮೆಲ್ವಿನ್ ಸಮಾರಂಭ ಸಂಯೋಜಿಸಿದರು. ಕೆಎಲ್ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿಯ ಕುಲಪತಿ ಡಾ.ವಿವೇಕ ಸಾವೊಜಿ ಆನ್ಲೈನ್ನಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಕ್ಯಾಂಪಸ್ನಲ್ಲಿ ಕೈಗೊಂಡಿರುವ ಸ್ವಚ್ಛತಾ ಉಪಕ್ರಮಗಳನ್ನು ವಿವರಿಸಿದರು. ಕುಲಸಚಿವ ಡಾ.ವಿ.ಎ. ಕೋಠಿವಾಲೆ ಮತ್ತು ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ.ಅಶ್ವಿನಿ ನರಸಣ್ಣವರ ಉಪಸ್ಥಿತರಿದ್ದರು. ಉಪ ಕುಲಸಚಿವ ಡಾ.ಎಂ.ಎಸ್. ಗಣಾಚಾರಿ ವಂದಿಸಿದರು.

ತಂಡವನ್ನು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.