ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಲು ಸಲಹೆ

Last Updated 10 ನವೆಂಬರ್ 2020, 9:22 IST
ಅಕ್ಷರ ಗಾತ್ರ

ಬೆಳಗಾವಿ: ‘ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯದ ಜೊತೆಗೆ ಸಾಂಸ್ಕೃತಿಕ ಸ್ಪರ್ಧೆ ಮೊದಲಾದ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಈ ಮೂಲಕ ಸ್ಪರ್ಧಾತ್ಮಕ ಮನೋಭಾವ ರೂಢಿಸಿಕೊಳ್ಳಬೇಕು’ ಎಂದುಜ್ಞಾನ ಪ್ರಭೋದನ ಶಾಲೆಯ ಪ್ರಾಚಾರ್ಯೆ ಮಂಜರಿ ರಾನಡೆ ಸಲಹೆ ನೀಡಿದರು.

ಇಲ್ಲಿನ ಸುರೇಶ ಅಂಗಡಿ ಶಿಕ್ಷಣ ಸಂಸ್ಥೆಯ ಅಂಗಡಿ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಜಿಲ್ಲೆಯ ಗ್ರಾಮೀಣ ಮತ್ತು ನಗರದ ಎಲ್ಲ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ‘ಕಲಾ ಸಂಗಮ’ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿ ಅವರು ಮಾತನಾಡಿದರು.

‘ಸೋಲು–ಗೆಲುವನ್ನು ಸಮನಾಗಿ ಸ್ವೀಕರಿಸಿ ಮುಂದಿನ ಸ್ಪರ್ಧೆಗೆ ತಯಾರಾಗಬೇಕು. ಈ ನಿಟ್ಟಿನಲ್ಲಿ ಪೋಷಕರು ಮಕ್ಕಳಿಗೆ ಸಲಹೆ, ಸಹಕಾರ ಹಾಗೂ ಪ್ರೋತ್ಸಾಹ ನೀಡಬೇಕು’ ಎಂದರು.

ಸಂಸ್ಥೆಯ ನಿರ್ದೇಶಿಕಿ ಶ್ರದ್ಧಾ ಶೆಟ್ಟರ ಅಧ್ಯಕ್ಷತೆ ವಹಿಸಿದ್ದರು. ಸ್ಪರ್ಧೆಗಳನ್ನು ಗೂಗಲ್ ಮೀಟ್‌ನಲ್ಲಿ ನಡೆಸಲಾಯಿತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಲಾಯಿತು.

ಸಂಸ್ಥೆಯ ಆಡಳಿತಾಧಿಕಾರಿ ರಾಜು ಜೋಶಿ, ಅಕಾಡೆಮಿಕ್ಸ್‌ ನಿರ್ದೇಶಕ ಅಮರ ಬ್ಯಾಕೋಡಿ, ‘ಕಲಾಸಂಗಮ’ ಸಂಯೋಜಕ ಪ್ರೊ.ನಾಗೇಶ್ವರ ಡೆಮಿನಕೊಪ್ಪ ಇದ್ದರು.

ಪ್ರಾಚಾರ್ಯೆ ಸಂಗೀತಾ ದೇಸಾಯಿ ಸ್ವಾಗತಿಸಿದರು. ಪ್ರೊ.ಕಾರ್ತಿಕ ಕುಲಕರ್ಣಿ ಪರಿಚಯಿಸಿದರು. ಪ್ರೊ.ವಿನಿತಾ ಹೊಲ್ಲಿಕೇರಿ ನಿರೂಪಿಸಿದರು. ಪ್ರೊ.ಭರತ ನೀಲಜಕರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT