ಬೆಳಗಾವಿ: ದಕ್ಷಿಣ ಮಹಾರಾಷ್ಟ್ರದ ಪರ್ವತ ಶ್ರೇಣಿಗಳಲ್ಲಿ ಮತ್ತು ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕುಗಳ ಜಲಾನಯನ ಪ್ರದೇಶಗಳಲ್ಲಿ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಇದರಿಂದಾಗಿ ಚಿಕ್ಕೋಡಿ ತಾಲ್ಲೂಕಿನಲ್ಲಿ ಕೃಷ್ಣಾ ಮತ್ತು ಉಪನದಿಗಳು ಮೈದುಂಬಿ ಹರಿಯುತ್ತಿವೆ.

ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 53,500 ಕ್ಯುಸೆಕ್ ಮತ್ತು ದೂಧ್‌ಗಂಗಾ ನದಿಯಿಂದ 12,848 ಕ್ಯುಸೆಕ್ ಸೇರಿದಂತೆ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ 66,348 ಕ್ಯುಸೆಕ್ ನೀರು ಸೇರಿಕೊಳ್ಳುತ್ತಿದೆ. 24 ಗಂಟೆಗಳ ಅವಧಿಯಲ್ಲಿ ಕೃಷ್ಣಾ ನದಿಗೆ ಸೇರುವ ನೀರಿನ ಪ್ರಮಾಣ ಹೆಚ್ಚಾಗಿದೆ. ಕಲ್ಲೋಳ-ಯಡೂರ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತವಾಗಿದೆ.

ಬೆಳಗಾವಿ ನಗರದಲ್ಲಿ ಬುಧವಾರ ರಾತ್ರಿಯಿಂದಲೂ ಜಿಟಿಜಿಟಿ ಮಳೆಯಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.