ಸೋಮವಾರ, ಸೆಪ್ಟೆಂಬರ್ 20, 2021
21 °C

ಸ್ವಂತ ಖರ್ಚಿನಲ್ಲಿ ಲಕ್ಷ್ಮಿ ಕಲ್ಯಾಣ ಮಂಟಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮದಲ್ಲಿ ಗುಡದಮ್ಮ ದೇವಸ್ಥಾನದ ನೂತನ ಕಲ್ಯಾಣ ಮಂಟಪದ ಕಟ್ಟಡದ ಕಾಮಗಾರಿಗೆ ಶನಿವಾರ ಚಾಲನೆ ನೀಡಲಾಯಿತು.

ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಹಾಗೂ ದೇವಸ್ಥಾನದ ಸಮಿತಿಯವರು ಪೂಜೆ ನೆರವೇರಿಸಿದರು.

‘ಗುಡದಮ್ಮ ದೇವಸ್ಥಾನದ ಕಲ್ಯಾಣಮಂಟಪ ನಿರ್ಮಾಣವು ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿತ್ತು. ಅದಕ್ಕೆ ಸ್ಪಂದಿಸಿ ಶಾಸಕರು ವೈಯಕ್ತಿಕ ಖರ್ಚಿನಲ್ಲಿ ನಿರ್ಮಾಣ ಮಾಡಿಕೊಡಲು ಮುಂದಾಗಿದ್ದಾರೆ’ ಎಂದು ಚನ್ನರಾಜ ತಿಳಿಸಿದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಮುಖಂಡರಾದ ಶಂಕರಗೌಡ ಪಾಟೀಲ, ಬಸವರಾಜ ಮ್ಯಾಗೋಟಿ, ಮೃಣಾಲ ಹೆಬ್ಬಾಳಕರ, ತೌಸಿಫ್ ಫಣಿಬಂಧ, ಸಮೀರ, ಚಾಟೆ, ಪ್ರಾಥಮಿಕ ಕೃಷಿ ಪತ್ತಿನ ಸೊಸೈಟಿಯ ಅಧ್ಯಕ್ಷರು, ತಮ್ಮಣ್ಣ, ದೇವಸ್ಥಾನ ಸಮಿತಿಯವರು ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು