ಬೆಳಗಾವಿ: ‘ಆಧ್ಯಾತ್ಮಿಕ ನೆಲೆಗಟ್ಟಿನಲ್ಲೆ ಸಾಮಾಜಿಕ ಸಾಮರಸ್ಯವನ್ನು ಎತ್ತಿ ಹಿಡಿದ ಕೀರ್ತಿ ಸಂತ ಶ್ರೇಷ್ಠ ಕನಕದಾಸರಿಗೆ ಸಲ್ಲುತ್ತದೆ. ಅವರ ಬದುಕು ಹಾಗೂ ಸಂದೇಶ ನಮ್ಮೆಲ್ಲರಿಗೂ ಮಾದರಿಯಾಗಿದೆ. ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಹೇಳಿದರು.

ಇಲ್ಲಿನ ವಿಟಿಯುನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕನಕದಾಸ ಜಯಂತಿಯಲ್ಲಿ ಫೋಟೊಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

‘ಕನಕದಾಸರ ಬದುಕು ತ್ಯಾಗದಿಂದ ಕೂಡಿದೆ. ಒಬ್ಬ ದಳಪತಿ ಎಲ್ಲವನ್ನೂ ತ್ಯಾಗ ಮಾಡಿ ಭಕ್ತಿಪರಂಪರೆಯಲ್ಲಿ ಉಡುಪಿ ಕೃಷ್ಣನ ಆತ್ಮಭಕ್ತನಾಗಿ ಕೀರ್ತನೆಗಳನ್ನು ರಚಿಸಿ ಕನ್ನಡ ಸಾಹಿತ್ಯ ಹಾಗೂ ಸಂಗೀತ ಕ್ಷೇತ್ರಕ್ಕೆ ಶ್ರೇಷ್ಠ ಕೊಡುಗೆ ಕೊಟ್ಟಿದ್ದಾರೆ. ಈ ಕೀರ್ತನೆಗಳು ಕೇವಲ ದಾಸ ಮತ್ತು ಆರಾಧ್ಯ ದೇವರ ನಡುವಿನ ಭಕ್ತಿಯ ಅಂಶಗಳನ್ನ ಹೇಳದೆ ಸಾಮಾಜಿಕ ಬದುಕು ಹೇಗಿರಬೇಕು ಎನ್ನುವುದನ್ನೂ ಸಾರಿದೆ’ ಎಂದರು.

‘ಮುಂದಿನ ಪೀಳಿಗೆಗೆ ಇಂತಹ ಮಹನೀಯರ ವಿಚಾರಗಳನ್ನು ಒಯ್ಯುವ ಜವಾಬ್ದಾರಿ ನಮ್ಮ ಮೇಲಿದೆ’ ಎಂದು ತಿಳಿಸಿದರು.

ಕುಲಸಚಿವರಾದ ಪ್ರೊ.ಎ.ಎಸ್. ದೇಶಪಾಂಡೆ, ಪ್ರೊ.ಸತೀಶ ಅಣ್ಣಿಗೇರಿ, ಹಣಕಾಸು ಅಧಿಕಾರಿ ಎಂ.ಎ. ಸಪ್ನಾ, ಸ್ಥಾನಿಕ ಎಂಜಿನಿಯರ್ ಹೇಮಂತ್‌ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.