ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂಗ್ರಾಳಿ ಬಿ.ಕೆ. ಪಂಚಾಯ್ತಿಗೆ ವಿಶೇಷ ಪ್ರಶಸ್ತಿ

Last Updated 10 ಏಪ್ರಿಲ್ 2021, 13:13 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನ ಕಂಗ್ರಾಳಿ ಬಿ.ಕೆ. ಗ್ರಾಮ ಪಂಚಾಯ್ತಿಯು ‘ಮಹಿಳಾ ಸ್ನೇಹಿ ಗ್ರಾಮ ಪಂಚಾಯ್ತಿ’ ಎಂಬ ವಿಶೇಷ ಪ್ರಶಸ್ತಿಗೆ ಭಾಜನವಾಗಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ 2020–21ನೇ ಸಾಲಿನಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಹಿಳಾ ಭಾಗವಹಿಸುವಿಕೆ ಪ್ರಮಾಣದಲ್ಲಿ (ಶೇ 97, 45,225 ಮಾನವ ದಿನಗಳ ಸೃಜನೆ) ಸಾಧನೆ ತೋರಿರುವುದಕ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಿಂದ ಹುಬ್ಬಳ್ಳಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರದಾನ ಮಾಡಿದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸಂಧ್ಯಾ ಉಮೇಶ ಚೌಗಲೆ ಮತ್ತು ಪಿಡಿಒ ಜಿ.ಐ. ಬರಗಿ ಪ್ರಶಸ್ತಿ ಸ್ವೀಕರಿಸಿದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT