ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಡವಿರೋಧಿಗಳ ವಿರುದ್ಧ ಕ್ರಮ ಜರುಗಿಸಿ: ಅಶೋಕ ಚಂದರಗಿ

Last Updated 27 ಮೇ 2022, 15:07 IST
ಅಕ್ಷರ ಗಾತ್ರ

ಬೆಳಗಾವಿ: ‘ಗಡಿ ಕನ್ನಡಿಗರ ಹಿತ ಕಾಪಾಡುವ ವಿಷಯದಲ್ಲಿ ರಾಜ್ಯ ಸರ್ಕಾರ ಸಂವೇದನೆ ಕಳೆದುಕೊಂಡಿದೆ. ಈ ವಿಚಾರದಲ್ಲಿ ಜನಪ್ರತಿನಿಧಿಗಳು ಮೌನ ವಹಿಸುತ್ತಿದ್ದಾರೆ. ಹಾಗಾಗಿ ಕನ್ನಡಿಗರ ಮೇಲೆ ಅನ್ಯಾಯ ಹೆಚ್ಚುತ್ತಿದೆ’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಆರೋಪಿಸಿದ್ದಾರೆ.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಗಡಿ ಉಸ್ತುವಾರಿ ಸಚಿವರನ್ನು ನೇಮಿಸಬೇಕು. ಗಡಿ ಸಂರಕ್ಷಣೆ ಆಯೋಗ ಪುನರ್‌ರಚಿಸಿ, ಕಚೇರಿಯನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕು. ಗಡಿಯಲ್ಲಿ ನಾಡವಿರೋಧಿ ಚಟುವಟಿಕೆ ಕೈಗೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಎಂಇಎಸ್‌ ವಿರುದ್ಧ ಪ್ರತಿಭಟನೆ: ತಾಲ್ಲೂಕಿನ ಧಾಮಣೆ ಗ್ರಾಮದಲ್ಲಿ ಗುರುವಾರ ತಡರಾತ್ರಿ ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಕನ್ನಡಿಗರ ಮೇಲೆ ಹಲ್ಲೆ ನಡೆಸಿದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ಕಾರ್ಯಕರ್ತರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ನವನಿರ್ಮಾಣ ಸೇನೆ ಜಿಲ್ಲಾ ಘಟಕದ ಕಾರ್ಯಕರ್ತರು ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಶುಕ್ರವಾರ ಪ್ರತಿಭಟಿಸಿದರು.

ಮುಖಂಡರಾದ ಬಾಬು ಸಂಗೋಡಿ, ಸಂಪತಕುಮರ್‌ ದೇಸಾಯಿ, ಅನಿಲ ದಡ್ಡಿಮನಿ ಮೊದಲಾದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT