ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಕಾಲೇಜಿಗೆ ನುಗ್ಗಲು ಯತ್ನ- ಪ್ರತಿಭಟನಾಕಾರರ ವಶ

ಕನ್ನಡ ಧ್ವಜ ಹಿಡಿದು ಕುಣಿದ ವಿದ್ಯಾರ್ಥಿಯ ಮೇಲೆ ಸಹಪಾಠಿಗಳು ಹಲ್ಲೆ ನಡೆಸಿದ ಘಟನೆ
Last Updated 1 ಡಿಸೆಂಬರ್ 2022, 8:54 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಟಿಳಕವಾಡಿಯಲ್ಲಿರುವ ಕೆಎಲ್ಎಸ್ ಸಂಸ್ಥೆಯ ಗೋಗಟೆ ಕಾಲೇಜಿಗೆ ಗುರುವಾರ ಮುತ್ತಿಗೆ ಹಾಕಲು ಯತ್ನಿಸಿದ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಕಾಲೇಜಿನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಧ್ವಜ ಹಿಡಿದು ಕುಣಿದ ವಿದ್ಯಾರ್ಥಿಯ ಮೇಲೆ ಸಹಪಾಠಿಗಳು ಹಲ್ಲೆ ನಡೆಸಿದ ಘಟನೆ ಖಂಡಿಸಿ, ಕರವೇ ವಿವಿಧ ಬಣಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ಕಾಲೇಜಿಗೆ ನುಗ್ಗಲು ಮುಂದಾದರು.

ಗೇಟ್ ಬಳಿಯೇ ಅವರನ್ನು ತಡೆದ ಪೊಲೀಸರು, ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು. ಇದರಿಂದ ಆಕ್ರೋಶಗೊಂಡ ಎಲ್ಲ ಕಾರ್ಯಕರತರೂ ಧಿಕ್ಕಾರ ಕೂಗಿದರು.

ಕೆಲವರು ಕಾಲೇಜು ಕಾಂಪೌಂಡ್ ಮೇಲೆ ಹತ್ತಿ ಮುಖ್ಯದ್ವಾರ ಏರಿ ಅದರ ಮೇಲೆ ಕನ್ನಡ ಧ್ವಜ ಕಟ್ಟಿದರು.

ಮತ್ತೆ ಇಬ್ಬರು ಪೊಲೀಸ್ ವಾಹನದ ಮೇಲೆಯೇ ಹತ್ತಿ ಧ್ವಜ ಹಾರಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಪೊಲೀಸರು ಬಿಗಿ ಬಂದೋಬಸ್ತ್ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT