ಬೆಳಗಾವಿ: 'ಇಲ್ಲಿ ಬುಧವಾರ ನಡೆಯುತ್ತಿರುವ ಮಹಾನಗರ ಪಾಲಿಕೆ ಪರಿಷತ್ ಸಭೆಯಲ್ಲಿ, 'ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ' ಎಂಬ ನಿರ್ಣಯ ಕೈಗೊಳ್ಳಬೇಕು' ಎಂದು ಒತ್ತಾಯಿಸಿ ಪಾಲಿಕೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದರು.

ಬೆಳಿಗ್ಗೆ 11.30ಕ್ಕೆ ಸಭೆ ನಿಗದಿಯಾಗಿತ್ತು. ಅದಕ್ಕೂ ಮುನ್ನವೇ ಹೋರಾಟಗಾರರು ಪಾಲಿಕೆ ಮುಂದೆ ಸಮಾವೇಶಗೊಂಡು, ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಆರಂಭಿಸಿದರು.

ಪ್ರತಿಭಟನಕಾರರ ಬಳಿ ಆಗಮಿಸಿದ ಮೇಯರ್ ಪ್ರೀತಿ ಕಾಮಕರ ಹಾಗೂ ಉಪಮೇಯರ್ ಹನುಮಂತ ಕೊಂಗಾಲಿ ಅವರು, ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳುವುದಾಗಿ ಭರವಸೆ ಕೊಟ್ಟರು.

ಆದರೂ ಪಟ್ಟು ಸಡಿಲಿಸದ ಹೋರಾಟಗಾರರು ಪ್ರತಿಭಟನೆ ಮುಂದುವರಿಸಿದ್ದಾರೆ.

ಬಳಿಕ ಸಭೆ ಆರಂಭಗೊಂಡಿದ್ದು, ಕಾಂಗ್ರೆಸ್ ನ ನಾಮನಿರ್ದೇಶಿತ ಸದಸ್ಯರಾದ ರಮೇಶ ಸೊಂಟಕ್ಕಿ, ದಿನೇಶ ನಾಶಿಪುಡಿ, ಕರ್ನಾಟಕದ ಪರ ನಿರ್ಣಯ ಕೈಗೊಳ್ಳುವಂತೆ ಆಗ್ರಹಿಸಿದರು.

ಆಗ ಮೇಯರ್ ಪ್ರೀತಿ ಕಾಮಕರ, 'ಇಂಥ ನಿರ್ಣಯ ಕೈಗೊಳ್ಳಲು ಅವಕಾಶವಿದೆಯೇ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದು ಕೇಳಲಾಗುವುದು. ನಂತರ ಮುಂದಿನ ಕ್ರಮ ವಹಿಸಲಾಗುವುದು' ಎಂದು ತಿಳಿಸಿದರು.

ಇದಕ್ಕೆ ತೃಪ್ತರಾಗದ ಸದಸ್ಯರು, 'ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವೆಂದು ನಿರ್ಣಯ ತೆಗೆದುಕೊಳ್ಳಲೇಬೇಕು' ಎಂದು ಪಟ್ಟು ಹಿಡಿದಿದ್ದಾರೆ.

'ಮೇಯರ್ ಅಡ್ಡ ಗೋಡೆ ದೀಪ ಇಟ್ಟಂತೆ ಮಾತನಾಡಬಾರದು. ಸ್ಪಷ್ಟವಾಗಿ ನಿರ್ಣಯ ತೆಗೆದುಕೊಳ್ಳಬೇಕು' ಎಂದು ಆಗ್ರಹಿಸುತ್ತಿದ್ದಾರೆ.

ಈ ನಿರ್ಣಯ ತೆಗೆದುಕೊಳ್ಳದಂತೆ ಎಂಇಎಸ್ ಬೆಂಬಲಿತ ಸದಸ್ಯರು ಆಗ್ರಹಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.