ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ ಮುಖ್ಯಮಂತ್ರಿ ಹೇಳಿಕೆ ವಿರುದ್ಧ ಕನ್ನಡ ಹೋರಾಟಗಾರರ ಆಕ್ರೋಶ

Last Updated 18 ಜನವರಿ 2021, 7:05 IST
ಅಕ್ಷರ ಗಾತ್ರ

ಬೆಳಗಾವಿ: 'ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ' ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಇಲ್ಲಿನ ಕನ್ನಡಪರ ಹೋರಾಟಗಾರರು ಸೋಮವಾರ ಪ್ರತಿಭಟನೆ ನಡೆಸಿದರು.

ರಾಣಿ ಚನ್ನಮ್ಮ ವೃತ್ತದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

ಕರವೇ ನಾರಾಯಣಗೌಡ ಬಣ, ಶಿವರಾಮೇಗೌಡ ಹಾಗೂ ಕರುನಾಡ ಸೇವಕರು ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭ ಮಾತನಾಡಿದ ಕರವೇ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ತಕ್ಕಪಾಠ ಕಲ್ಲಿಸುತ್ತೇವೆ. ಕರ್ನಾಟಕದ ಒಂದಿಚು ಜಾಗವನ್ನೂ ಮಹಾರಾಷ್ಟ್ರಕ್ಕೆ ಬಿಟ್ಟು ಕೊಡುವುದಿಲ್ಲ' ಎಂದರು.

ಗಡಿ ಭಾಗವನ್ನು ಆಕ್ರಮಿತ ಪ್ರದೇಶವೆಂದು ಆ ರಾಜ್ಯದ ಮುಖ್ಯಮಂತ್ರಿ ಹೇಳಿಕೆ ನೀಡಿರುವುದು ಖಂಡನೀಯ. ಗಡಿ ವಿವಾದ ನ್ಯಾಯಾಲಯದಲ್ಲಿ ಇರುವಾಗ ಈ ರೀತಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರವು ನೆರೆಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಗಡಿ ಭಾಗದಲ್ಲಿ ವಿವಾದ ಸೃಷ್ಟಿಸುತ್ತಿರುವ ಶಿವಸೇನೆ, ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಸಂಘಟನೆಗಳನ್ನು
ನಿಷೇಧಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದ ಹಿತಾಸಕ್ತಿ ಕಾಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗಂಭೀರವಾದ ಹೆಜ್ಜೆಗಳನ್ನು ಇಡಬೇಕು. ಇಲ್ಲವಾದಲ್ಲಿ ಹೋರಾಟ ತೀವ್ರಗೊಳಿಸಬೇಕಾಗುತ್ತದೆ. ಇದರಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾದರೆ ಅದಕ್ಕೆ ಸರ್ಕಾರವೇ ಹೊಣೆ ಆಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕರವೇ ರಾಜ್ಯ ಘಟಕದ ಸಂಚಾಲಕ ಮಹಾದೇವ ತಳವಾರ, ಮುಖಂಡರಾದ ವಾಜೀದ್ ಹಿರೇಕುಡಿ, ಕಸ್ತೂರಿ ಭಾವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT