ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಧ್ವಜ ತೆರವಿಗೆ ನಾಳೆ ಎಂಇಎಸ್ ಪ್ರತಿಭಟನೆ

Last Updated 20 ಜನವರಿ 2021, 15:06 IST
ಅಕ್ಷರ ಗಾತ್ರ

ಬೆಳಗಾವಿ: ನಗರದ ಮಹಾನಗರಪಾಲಿಕೆ ಮುಂಭಾಗ ಕನ್ನಡಪರ ಹೋರಾಟಗಾರರು ಹಾರಿಸಿರುವ ಕನ್ನಡ ಧ್ವಜ ತೆರವುಗೊಳಿಸುವಂತೆ ಒತ್ತಾಯಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌)ಯಿಂದ ಜ. 21ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮಹಾರಾಷ್ಟ್ರದ ಕೆಲವು ಮುಖಂಡರು ಮತ್ತು ಶಿವಸೇನೆಯ ಕಾರ್ಯಕರ್ತರು ಕೂಡ ಭಾಗವಹಿಸಲಿದ್ದಾರೆ. ಗಡಿ ವಿವಾದ ಕೆದಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

‘ಜ.20ರ ಒಳಗೆ ಧ್ವಜ ತೆರವುಗೊಳಿಸಬೇಕು. ಇಲ್ಲವಾದಲ್ಲಿ 21ರಂದು ಬೃಹತ್‌ ಪ್ರತಿಭಟನೆ ನಡೆಸಲಾಗುವುದು’ ಎಂದು ಎಂಇಎಸ್ ಮುಖಂಡರು ಎಚ್ಚರಿಕೆ ನೀಡಿದ್ದರು. ಹೋರಾಟಕ್ಕೆ ಬೆಂಬಲ ಸೂಚಿಸಲಾಗುವುದು ಎಂದು ಶಿವಸೇನೆ ಮುಖಂಡರೂ ಘೋಷಿಸಿದ್ದರು. ಹಳ್ಳಿ ಹಳ್ಳಿಯಿಂದ ಮರಾಠಿ ಭಾಷಿಗರು ಬೆಳಗಾವಿಗೆ ಬರಬೇಕು ಎಂದು ಎರಡೂ ಸಂಘಟನೆಗಳು ಪ್ರಚೋದನೆ ನೀಡುತ್ತಿವೆ ಎಂದು ತಿಳಿದುಬಂದಿದೆ.

‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ’ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆಯು ಎಂಇಎಸ್‌ನವರಿಗೆ ಕುಮ್ಮಕ್ಕು ಕೊಟ್ಟಂತಾಗಿದೆ. ಇದರಿಂದ ಉತ್ತೇಜಿತರಾಗಿರುವ ಅವರು ಹೆಚ್ಚಿನ ಜನರನ್ನು ಸೇರಿಸುವ ಮೂಲಕ ಜಿಲ್ಲಾಡಳಿತದ ವಿರುದ್ಧ ತೊಡೆ ತಟ್ಟಲು ಸಜ್ಜಾಗಿದ್ದಾರೆ. ಮುಂಬರುವ ಮಹಾನಗರಪಾಲಿಕೆ ಚುನಾವಣೆಯಲ್ಲಿ ಸಂಘಟನೆಯ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಎಂಇಎಸ್ ಮುಖಂಡರು ಯೋಜಿಸಿದ್ದಾರೆ ಎನ್ನಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT