ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಕನ್ನಡ ಬಾವುಟದ ದೊಡ್ಡ ಕಂಬ ಕತ್ತರಿಸಿದರು!

Last Updated 29 ಡಿಸೆಂಬರ್ 2020, 13:13 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಮೆ ಬಳಿ ಕನ್ನಡ ಬಾವುಟ ಹಾರಿಸಲು ಹಾಕಿದ್ದ ದೊಡ್ಡ ಕಂಬವನ್ನು ಕತ್ತರಿಸಿ, ಚಿಕ್ಕದಾಗಿ ಮಾಡಿರುವುದಕ್ಕೆ ಕನ್ನಡಪರ ಹೋರಾಟಗಾರರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಈ ಕೃತ್ಯವು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಕನ್ನಡ ಬಾವುಟಕ್ಕೆ ಅವಮಾನ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಕಂಬವನ್ನು ಕತ್ತರಿಸಿ ಚಿಕ್ಕದಾಗಿ ಮಾಡಿದವರನ್ನು ಕೂಡಲೇ ಪತ್ತೆ ಹಚ್ಚಬೇಕು’ ಎಂದು ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಭೇಟಿ ನೀಡಿ ಪರಿಶೀಲಿಸಿದರು.

ವೃತ್ತದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ವೀಕ್ಷಿಸಿ ಕ್ರಮ ವಹಿಸಲಾಗುವುದು ಎಂದು ಎಸಿಪಿ ಎನ್.ವಿ. ಭರಮನಿ ಕನ್ನಡಪರ ಹೋರಾಟಗಾರರಿಗೆ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT