ಬುಧವಾರ, ಡಿಸೆಂಬರ್ 2, 2020
17 °C

ಬೆಳಗಾವಿ ನಗರ ಪಾಲಿಕೆ ಆವರಣದಲ್ಲಿ ಹಾರಿಸಿದ್ದ ಕನ್ನಡ ಧ್ವಜ ತೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ನಗರಪಾಲಿಕೆ ಆವರಣದಲ್ಲಿ ಕನ್ನಡ ಹೋರಾಟಗಾರ್ತಿ ಕಸ್ತೂರಿ ಬಾವಿ ನೇತೃತ್ವದಲ್ಲಿ ಕೆಲವು ಯುವಕರು ಭಾನುವಾರ ಮಧ್ಯರಾತ್ರಿ ಹಾರಿಸಿದ್ದ ಕನ್ನಡ ಬಾವುಟವನ್ನು ಪೊಲೀಸರು ತಕ್ಷಣ ತೆರವುಗೊಳಿಸಿ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕನ್ನಡ ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದಿದೆ.

ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಪ್ರಭಾವದಿಂದಾಗಿ ಪಾಲಿಕೆಯಲ್ಲಿ ಕನ್ನಡ ಧ್ವಜ ಇಲ್ಲ. ಅಲ್ಲಿ ಕನ್ನಡ ಧ್ವಜ ಹಾರಿಸುವುದಕ್ಕಾಗಿ ಕಸ್ತೂರಿ ಅನೇಕ ವರ್ಷಗಳಿಂದ ಶಪಥ ಮಾಡಿದ್ದರು. ಅಲ್ಲಿವರೆಗೆ ಪಾದರಕ್ಷೆ ಧರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ರಾಜ್ಯೋತ್ಸವದ ಅಂಗವಾಗಿ ಮದ್ಯರಾತ್ರಿ ಧ್ವಜ ತಂದು  ಹಾರಿಸಿದ್ದಾರೆ. ಇದೇ‌ ಮೊದಲ ಬಾರಿಗೆ ಪಾಲಿಕೆಯಲ್ಲಿ ‌ಕನ್ನಡ ಧ್ವಜ ಹಾರಾಡಿದೆ.

ತೆರವುಗೊಳಿಸಿದ ಪೊಲೀಸರ ಕ್ರಮ ಖಂಡಿಸಿ ಕಸ್ತೂರಿ ಪ್ರತಿಭಟನೆಯನ್ನೂ ನಡೆಸಿದ್ದಾರೆ. ಬಳಿಕ ಪೊಲೀಸರನ್ನು ಅವರನ್ನು ಅಲ್ಲಿಂದ ಕಳುಹಿಸಿದರು ಎಂದು ತಿಳಿದುಬಂದಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು