ಬೆಳಗಾವಿಯ ಜನಪ್ರತನಿಧಿಗಳು ಮತಗಳ ಆಸೆಗೆ ಮರಾಠಿಗರ ಜತೆ ಒಳಒಪ್ಪಂದ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು. ವಿಧಾನಸೌಧಕ್ಕೆ ಬರುವ ಆಸೆ ಇದ್ದರೆ ಕನ್ನಡಿಗರ ಪರ ನಿಲ್ಲಬೇಕು.
ಟಿ.ಎ.ನಾರಾಯಣಗೌಡ, ಅಧ್ಯಕ್ಷ, ಕರ್ನಾಟಕ ರಕ್ಷಣಾ ವೇದಿಕೆ
ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುತ್ತಿರುವ ಶಿವಸೇನಾ ಪಕ್ಷವನ್ನು ಕೇಂದ್ರ ಸರ್ಕಾರ ನಿಷೇಧಿಸಬೇಕು. ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮರಾಠಿಯಲ್ಲಿ ಮಾತನಾಡುವುದನ್ನು ಬಿಡಬೇಕು
ಪ್ರವೀಣ ಶೆಟ್ಟಿ, ಅಧ್ಯಕ್ಷ, ಕರ್ನಾಟಕ ರಕ್ಷಣಾ ವೇದಿಕೆ
ಕನ್ನಡ ಮರಾಠಿ ಭಾಷಾ ಬಾಂಧವ್ಯ ಹದಗೆಡಿಸುವ ಮಹಾರಾಷ್ಟ್ರದ ಸಂಘಟನೆಗಳಿಗೆ ರಾಜ್ಯದಲ್ಲಿ ಅವಕಾಶ ಕೊಡಬಾರದು. ಕನ್ನಡಿಗರ ಮೇಲೆ ಹಲ್ಲೆ ಮಾಡುವ ಪ್ರಯತ್ನ ಮುಂದುವರದಲ್ಲಿ ಕನ್ನಡಿಗರು ಉಗ್ರ ಹೋರಾಟ ಮಾಡುತ್ತಾರೆ.