ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕನ್ನಡ ನಾಡನ್ನು ಇನ್ನಷ್ಟು ಸಮೃದ್ಧಿಗೊಳಿಸೋಣ’

Last Updated 1 ನವೆಂಬರ್ 2019, 14:45 IST
ಅಕ್ಷರ ಗಾತ್ರ

ಗೋಕಾಕ: ‘ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ, ಕನ್ನಡ ನಾಡು-ನುಡಿಯನ್ನು ಇನ್ನಷ್ಟು ಸಮೃದ್ಧಗೊಳಿಸಲು ನಾವೆಲ್ಲರೂ ಶ್ರಮಿಸಬೇಕಾಗಿದೆ ಎಂದು ತಹಶೀಲ್ದಾರ್‌ ಪ್ರಕಾಶ ಹೊಳೆಪ್ಪಗೋಳ ಹೇಳಿದರು.

ಶುಕ್ರವಾರ ಇಲ್ಲಿನ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯ್ತಿ ಹಾಗೂ ನಗರಸಭೆ ವತಿಯಿಂದ ನಡೆದ 64ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳು, ವಿವಿಧ ಕ್ರೀಡೆಗಳಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು, ಅತ್ಯುತ್ತಮ ರೂಪಕಗಳಿಗೆ ಬಹುಮಾನ ವಿತರಿಸಲಾಯಿತು.

ತಾಲ್ಲೂಕು ‍ಪಂಚಾಯ್ತಿ ಅಧ್ಯಕ್ಷೆ ಸುನಂದಾ ಕರದೇಸಾಯಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಯಲ್ಲಪ್ಪ ನಾಯಕ, ಇಒ ಬಸವರಾಜ ಹೆಗ್ಗನಾಯಕ, ನಗರಸಭೆ ಪ್ರಭಾರ ಪೌರಾಯುಕ್ತ ವಿ.ಎಸ್. ತಡಸಲೂರ, ಸದಸ್ಯ ಎಸ್.ಎ. ಕೋತವಾಲ, ಎಪಿಎಂಸಿ ಅಧ್ಯಕ್ಷ ಅಡಿವೆಪ್ಪ ಕಿತ್ತೂರ, ಬಿಜೆಪಿ ಮುಖಂಡ ಅಶೋಕ ಪೂಜಾರಿ, ಸೋಮಶೇಖರ ಮಗದುಮ್ಮ, ಕರವೇ ಅಧ್ಯಕ್ಷರಾದ ಬಸವರಾಜ ಖಾನಪ್ಪನ್ನವರ ಮತ್ತು ಕಿರಣ ಡಮಾಮಗರ, ತಾಲ್ಲೂಕು ವೈದ್ಯಾಧಿಕಾರಿ ಡಾ.ರವಿಂದ್ರ ಆಂಟಿನ್, ಆರ್‌ಎಫ್‌ಒ ಕೆಂಪಣ್ಣ ವಣ್ಣೂರ, ಬಿಇಒ ಜಿ.ಬಿ. ಬಳಗಾರ, ಸಿಪಿಐ ಶ್ರೀಧರ ಸಾತಾರೆ, ಎಸ್.ಎಸ್. ಅಂಗಡಿ ಇದ್ದರು.

ಶಿಕ್ಷಕ ರಾಮಚಂದ್ರ ಕಾಕಡೆ ನಿರೂಪಿಸಿದರು. ಎ.ಜಿ. ಕೋಳಿ ಸ್ವಾಗತಿಸಿದರು.

ಇದಕ್ಕೂ ಮುನ್ನ ತಹಶೀಲ್ದಾರ್‌ ಕಚೇರಿ ಬಳಿಯಿಂದ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT