ಮಂಗಳವಾರ, ನವೆಂಬರ್ 19, 2019
22 °C

‘ಕನ್ನಡದ ಕಂಪು ಪಸರಿಸುತ್ತಿರುವ ಕೆಎಸ್‌ಆರ್‌ಟಿಸಿ’

Published:
Updated:
Prajavani

ಬೆಳಗಾವಿ: ‘ರಾಜ್ಯದಿಂದ ಹೊರ ರಾಜ್ಯಕ್ಕೆ ಕನ್ನಡದ ಕಂಪನ್ನು ಪಸರಿಸುವ ಕಾರ್ಯವನ್ನು ಕೆಎಸ್‌ಆರ್‌ಟಿಸಿ ಮಾಡುತ್ತಿದೆ’ ಎಂದು ಎನ್‌ಡಬ್ಯುಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್. ಮಂಜಿ ಹೇಳಿದರು.

ಇಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕನ್ನಡ ಕ್ರಿಯಾ ಸಮಿತಿ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ವಲಯಮಟ್ಟದ ಕನ್ನಡ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಕನ್ನಡ ಅಭಿಮಾನ ಮೂಡಿಸುವಲ್ಲಿ, ಬೆಳೆಸುವಲ್ಲಿ ಸಾಹಿತ್ಯದ ನಿಗಮದ ಕೊಡುಗೆಡಯೂ ಇದೆ. ಬಸ್‍ಗಳಲ್ಲಿ ಕನ್ನಡದ ಉಕ್ತಿಗಳು, ಘೋಷಣೆಗಳನ್ನು ಬರೆದು ಗಮನಸೆಳೆಯಲಾಗುತ್ತಿದೆ’ ಎಂದರು.

ಕ್ರಿಯಾ ಸಮಿತಿ ಅಧ್ಯಕ್ಷ ವ.ಚ. ಚೆನ್ನೆಗೌಡ ಮಾತನಾಡಿ, ‘ಉತ್ತರ ಕರ್ನಾಟಕದಲ್ಲಿ ಕಂಡು ಕೇಳರಿಯದ ಪ್ರಮಾಣದಲ್ಲಿ ಪ್ರವಾಹ ಬಂದಿದೆ. ಇದರಿಂದ ಜನರು ಮನೆ–ಮಠಗಳನ್ನು ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಅವರಿಗೆ ಇಡೀ ರಾಜ್ಯವೇ ಮಿಡಿದಿದೆ. ನಮ್ಮ ಸಂಸ್ಥೆಯಿಂದಲೂ ಸಂತ್ರಸ್ತರಿಗೆ ಸಹಾಯ ಮಾಡಿದ್ದೇವೆ’ ಎಂದು ತಿಳಿಸಿದರು.

ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ಹಿರಿಯ ಪತ್ರಕರ್ತ ರಾಘವೇಂದ್ರ ಜೋಶಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ ಇದ್ದರು.

ಪ್ರತಿಕ್ರಿಯಿಸಿ (+)