ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳಮೀಸಲಾತಿ ಜಾರಿಗೆ ಗೋವಿಂದ ಕಾರಜೋಳ ಆಗ್ರಹ

Published 17 ಡಿಸೆಂಬರ್ 2023, 7:19 IST
Last Updated 17 ಡಿಸೆಂಬರ್ 2023, 7:19 IST
ಅಕ್ಷರ ಗಾತ್ರ

ಬೆಳಗಾವಿ: ‘ಪರಿಶಿಷ್ಟರಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಜಾರಿ ಮಾಡಬೇಕು. ಆ ಮೂಲಕ ಅನ್ಯಾಯಕ್ಕೆ ಒಳಗಾಗಿರುವ ಮಾದಿಗ ಸಮುದಾಯಕ್ಕೆ ನ್ಯಾಯ ಒದಗಿಸಬೇಕು’ ಎಂದು ಬಿಜೆಪಿ ಮುಖಂಡ ಗೋವಿಂದ ಕಾರಜೋಳ ಹೇಳಿದರು.

ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಈಚೆಗೆ ನಡೆದ ‘ಮಾದಿಗ ಮುನ್ನಡೆ ಸಮಾವೇಶ’ ಉದ್ಘಾಟಿಸಿ ಮಾತನಾಡಿದ ಅವರು, ‘ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ನೀಡಬೇಕು.  ಮಾಧುಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟ ಉಪಸಮಿತಿ ನೀಡಿದ ವರದಿ ಆಧರಿಸಿ ಒಳ ಮೀಸಲಾತಿ ಜಾರಿ ಮಾಡಬೇಕು’ ಎಂದೂ ಆಗ್ರಹಿಸಿದರು.

ಶಾಸಕರಾದ ದುರ್ಯೋಧನ ಐಹೊಳೆ, ಬಸವರಾಜ ಮತ್ತಿಮೂಡು, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮುಖಂಡರಾದ ಉಮೇಶ ಕಾರಜೋಳ, ಮುತ್ತಣ್ಣ ಬೆನ್ನೂರ, ಬಾಳಪ್ಪ ಬೂದಿಹಾಳ, ಚಂದ್ರಕಾಂತ ಕಾಂತಿಕಾರ, ಸುಧಾಕರ ಸೂರ್ಯವಂಶಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT