ಶುಕ್ರವಾರ, ಅಕ್ಟೋಬರ್ 22, 2021
21 °C

ಕೆಎಲ್‌ಎಸ್ ಜಿಐಟಿ ವಿದ್ಯಾರ್ಥಿಗಳ ಸಾಧನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಕೆಎಲ್ಎಸ್ ಜಿಐಟಿಯ 3ನೇ ಸೆಮಿಸ್ಟರ್ ಇ ಅಂಡ್ ಸಿ ವಿದ್ಯಾರ್ಥಿ ಪ್ರಶಾಂತ್ ಪಾಟೀಲ ಹೈದರಾಬಾದ್‌ನ ನ್ಯೂ ಡ್ರ್ಯಾಗನ್ ಫೈಟರ್ಸ್ ಮಾರ್ಷಲ್ ಆರ್ಟ್ಸ್ ಅಸೋಸಿಯೇಶನ್ ಆಯೋಜಿಸಿದ್ದ 9ನೇ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಹಾಗೂ ಕಾಟಾ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

ಅವರು ಮಹೇಂದ್ರ ಮಹೇಂದ್ರಕರ ಮತ್ತು ಪ್ರಣಯ ಮಹೇಂದ್ರಕರ ಅವರಿಂದ ತರಬೇತಿ ಪಡೆದಿದ್ದಾರೆ. ಜಿಐಟಿಯ ಆಡಳಿತ ಮಂಡಳಿಯ ಅಧ್ಯಕ್ಷ ಎಂ.ಆರ್. ಕುಲಕರ್ಣಿ, ಪ್ರಾಂಶುಪಾಲ ಡಾ.ಜಯಂತ ಕೆ. ಕಿತ್ತೂರ, ವಿದ್ಯಾರ್ಥಿ ವ್ಯವಹಾರಗಳ ಡೀನ್ ಪ್ರೊ.ಸತೀಶ್ ದೇಶಪಾಂಡೆ, ಜಿಮ್ಖಾನಾದ ಅಧ್ಯಕ್ಷ ಪ್ರೊ.ರಮೇಶ ಮೇದಾರ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಪಿ.ವಿ. ಕಡಗದಕಾಯಿ, ಸಹಾಯಕ ದೈಹಿಕ ಶಿಕ್ಷಣ ನಿರ್ದೇಶಕಿ ಕ್ರಾಂತಿ ಕುರಣಕರ ಅಭಿನಂದಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.