ಬುಧವಾರ, ಮೇ 18, 2022
24 °C

ಕರಾಟೆ: ಶ್ರೇಯಸ್‌ಗೆ ಚಿನ್ನದ ಪದಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಹೊರವಲಯದ ಹಿಂಡಲಗಾ– ವಿಜಯನಗರದ ಶ್ರೇಯಸ್ ಚಂದ್ರಕಾಂತ್ ಕುಂಡೇಕರ್ ರಾಜಸ್ಥಾನದ ಉದಯಪುರದಲ್ಲಿ ಈಚೆಗೆ ನಡೆದ ಅಂತರರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದಿದ್ದಾರೆ.

ಏಷ್ಯನ್ ಕರಾಟೆ ಒಕ್ಕೂಟ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಭಾರತ, ಶ್ರೀಲಂಕಾ, ಬಾಂಗ್ಲಾ, ನೇಪಾಳ, ಪಾಕಿಸ್ತಾನ ಮತ್ತು ಚೀನಾ ಸ್ಪರ್ಧಿಗಳು ಭಾಗವಹಿಸಿದ್ದರು. 13 ವರ್ಷದೊಳಗಿನವರ ವಿಭಾಗದಲ್ಲಿ ಶ್ರೇಯಸ್ ಪ್ರಥಮ ಸ್ಥಾನ ಗಳಿಸಿದ್ದಾರೆ.

ಇದಕ್ಕೂ ಮುನ್ನ ಸಾಂಗ್ಲಿಯಲ್ಲಿ ನಡೆದ ಆಹ್ವಾನಿತ ಕರಾಟೆ ಸ್ಪರ್ಧೆಯಲ್ಲೂ ಚಿನ್ನದ ಪದಕ ಪಡೆದಿದ್ದರು. ವನಿತಾ ವಿದ್ಯಾಲಯದಲ್ಲಿ 8ನೇ ತರಗತಿ ಓದುತ್ತಿದ್ದು, ತರಬೇತುದಾರ ಭರಮಾಣಿ ಪಾಟೀಲ ಮಾರ್ಗದರ್ಶನದಲ್ಲಿ ಅಭ್ಯಾಸ ಮಾಡುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.