ಬಂದ್‌ ವೇಳೆ ರಸ್ತೆತಡೆ ನಡೆಸಿದ ಕರವೇ ಕಾರ್ಯಕರ್ತರ ವಶ, ಬಿಡುಗಡೆ

7

ಬಂದ್‌ ವೇಳೆ ರಸ್ತೆತಡೆ ನಡೆಸಿದ ಕರವೇ ಕಾರ್ಯಕರ್ತರ ವಶ, ಬಿಡುಗಡೆ

Published:
Updated:
Deccan Herald

ಬೆಳಗಾವಿ: ಇಂಧನ ಬೆಲೆ ಏರಿಕೆ ವಿರೋಧಿಸಿ ಇಲ್ಲಿನ ಗೋಕಾಕ–ಬೆಳಗಾವಿ ಹೆದ್ದಾರಿಯಲ್ಲಿ ಸೋಮವಾರ ರಸ್ತೆತಡೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಯುವ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಸೇರಿದಂತೆ 40 ಕಾರ್ಯಕರ್ತರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕರ್ತರು ಮಾನವ ಸರಪಳಿ ರಚಿಸಿದ್ದರಿಂದ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು.

ನಂತರ, ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !