ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಿಯು ಫಲಿತಾಂಶ: ಹಿಂದಕ್ಕೆ ಕುಸಿದ ಬೆಳಗಾವಿ ಜಿಲ್ಲೆ

Published 10 ಏಪ್ರಿಲ್ 2024, 11:38 IST
Last Updated 10 ಏಪ್ರಿಲ್ 2024, 11:38 IST
ಅಕ್ಷರ ಗಾತ್ರ

ಬೆಳಗಾವಿ: ಈ ಬಾರಿ ದ್ವಿತೀಯ ಪಿಯು ಫಲಿತಾಂಶದಲ್ಲಿ ಬೆಳಗಾವಿ ಶೈಕ್ಷಣಿಕ ಜಿಲ್ಲೆ ಎರಡು ಸ್ಥಾನ ಹಿಂದಕ್ಕೆ ಬಿದ್ದಿವೆ.

ಕಳೆದ ಬಾರಿಯ ರಾಜ್ಯಕ್ಕೆ 25ನೇ ಸ್ಥಾನ ಪಡೆದಿದ್ದ ಬೆಳಗಾವಿ ಶೈಕ್ಷಣಿಕ ಜಿಲ್ಲೆ ಈ ಬಾರಿ 27ನೇ ಸ್ಥಾನಕ್ಕೆ ಕುಸಿದಿದೆ. ಕಳೆದ ಬಾರಿ 16ನೇ ಸ್ಥಾನದಲ್ಲಿದ್ದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಈ ಬಾರಿ 15ನೇ ಸ್ಥಾನಕ್ಕೆ ಏರಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬೆಳಗಾವಿ ಡಿಡಿಪಿಯು ಎಂ.ಎಂ.ಕಾಂಬಳೆ ಅವರು, ‘ಈ ಬಾರಿ ಉತ್ತಮ ಫಲಿತಾಂಶ ನಿರೀಕ್ಷೆ ಮಾಡಲಾಗಿತ್ತು. ಆದರೆ, ಕಳೆದಬಾರಿಗಿಂತ ಏಕೆ ಕಡಿಮೆ ಆಗಿದೆ ಎಂಬುದು ಗೊತ್ತಾಗಿಲ್ಲ. ನಾಳೆಯೇ ಎಲ್ಲ ಕಾಲೇಜುಗಳ ಪ್ರಾಂಶುಪಾಲರ ಸಭೆ ಕರೆದಿದ್ದೇನೆ. ಕೂಲಂಕಶವಾಗಿ ಚರ್ಚಿಸಿ ಮಾಹಿತಿ ಪಡೆಯುತ್ತೇನೆ. ಮುಂದಿನ ಬಾರಿ ತಪ್ಪು ಮರುಕಳಿಸದಂತೆ ನೋಡಿಕೊಳ್ಳುತ್ತೇನೆ’ ಎಂದರು.

‘ಜಿಲ್ಲೆಯಲ್ಲಿ ಶಿಕ್ಷಕರು, ಉಪನ್ಯಾಸಕರ ಕೊರತೇ ಏನೂ ಇಲ್ಲ. ಮುಂಜಾಗ್ರತೆಯಿಂದ ವಿವಿಧ ಶೈಕ್ಷಣಿಕ ಕಾರ್ಯಕ್ರಮ ಹಾಕಿಕೊಂಡಿದ್ದೇವು. ಶಿಕ್ಷಕರಿಗೆ ಕಾರ್ಯಾಗಾರ, ಮಕ್ಕಳಿಗೆ ಮಾದರಿ ಪ್ರಶ್ನೆ ಪತ್ರಿಕೆ ಬಿಡಿಸುವ ರೂಢಿ, ರಿವಿಜನ್‌, ಸಂಪನ್ಮೂಲ ವ್ಯಕ್ತಿಗಳೊಂದಿಗೆ ಚರ್ಚೆ... ಹೀಗೆ ಫಲಿತಾಂಶ ಸುಧಾರಣೆಗೆ ವಿವಿಧ ಆಯಾಮಗಳನ್ನು ಪ್ರಯತ್ನ ಮಾಡಲಾಗಿದೆ. ಜಿಲ್ಲೆಗೆ 27ನೇ ಸ್ಥಾನ ಸಿಕ್ಕಿದ್ದರೂ ಮಕ್ಕಳ ಫಲಿತಾಂಶದಲ್ಲಿ ಸಾಕಷ್ಟು ಪ್ರಗತಿ ಕಂಡಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT