ಬೆಳಗಾವಿ: ಜಿಲ್ಲೆಯ ರಾಮದುರ್ಗ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಅರ್ಜುನ ಗುಡ್ಡದ ಹಾಗೂ ಖಾನಾಪುರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಇರ್ಫಾನ್ ತಾಳಿಕೋಟಿ ಅವರು ಟಿಕೆಟ್ ಸಿಗದ ಕಾರಣ ಪಕ್ಷದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ನಗರದಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅರ್ಜುನ ಗುಡ್ಡದ, ‘ಮಾಜಿ ಶಾಸಕ ಅಶೋಕ ಪಟ್ಟಣ ಅವರಿಗೆ ರಾಮದುರ್ಗ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿದ್ದು ಸರಿಯಲ್ಲ. ನನ್ನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ, ಸಿದ್ದರಾಮಯ್ಯ ಅವರ ಮೇಲೆ ಒತ್ತಡ ತಂದು ಟಿಕೆಟ್ ಪಡೆದುಕೊಂಡಿದ್ದಾರೆ. ನಾನು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ’ ಎಂದರು.
ಖಾನಾಪುರ ಟಿಕೆಟ್ ಅನ್ನು ಹಾಲಿ ಶಾಸಕಿ ಡಾ.ಅಂಜಲಿ ನಿಂಬಾಳಕರಗೆ ನೀಡಿದ್ದರಿಂದ, ಆಕಾಂಕ್ಷಿ ಇರ್ಫಾನ್ ತಾಳಿಕೋಟಿ ಬಂಡಾಯ ಏಳುವುದಾಗಿ ತಿಳಿಸಿದ್ದಾರೆ. ಇರ್ಫಾನ್ ಅವರು ಬಹುಕೋಟಿ ನಕಲಿ ಛಾಪಾ ಕಾಗದ ಹಗರಣದ ರೂವಾರಿ ಕರೀಂ ಲಾಲಾ ತೆಲಗಿ ಅವರ ಅಳಿಯ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.