ಬೆಳಗಾವಿ: ‘ಎಸ್‌ಡಿಪಿಐ ದೇಶದ್ರೋಹಿ ಸಂಘಟನೆ. ದೇಶದ ವಿರುದ್ಧ ಕೆಲಸ ಮಾಡುವ ಅವರು, ಭಾರತದ ಅಲ್ಪಸಂಖ್ಯಾತರ ವಿರೋಧಿಗಳು. ಅವರು ನನ್ನನ್ನು ಹೊಗಳಲು ಸಾಧ್ಯವೇ?’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.
‘2ಬಿ’ ಅಡಿ ಮುಸ್ಲಿಂ ಸಮುದಾಯಕ್ಕಿದ್ದ ಮೀಸಲಾತಿ ರದ್ದುಪಡಿಸಿದ ವಿಚಾರವಾಗಿ ಎಸ್‌ಡಿಪಿಐನವರು ತಮ್ಮ ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆಗೆ, ಇಲ್ಲಿ ಮಂಗಳವಾರ ಸುದ್ದಿಗಾರರಿಗೆ ಹೀಗೆ ಪ್ರತಿಕ್ರಿಯಿಸಿದರು.
‘ಎಂದಿಗೂ ನಮ್ಮ ಚಿಂತನೆ ಮತ್ತು ವಿಚಾರಗಳಿಗೆ ವಿರುದ್ಧವಾಗಿರುವ ಎಸ್‌ಡಿಪಿಐನವರಿಗೆ ನಾನು ಸೊಪ್ಪು ಹಾಕುವುದಿಲ್ಲ. ಅವರು ನೀಡಿದ ಹೇಳಿಕೆಗಳನ್ನು ಗಮನಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
‘ಏಪ್ರಿಲ್ ಮೊದಲ ವಾರ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಪ್ರಕಟಗೊಳ್ಳಲಿದೆ’ ಎಂದು ಹೇಳಿದರು.
ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ಗಾಗಿ ಗೊಂದಲ ಉಂಟಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿ.ಎಂ, ‘ಗೆಲ್ಲುವಂತಹ ಪಕ್ಷದ ಟಿಕೆಟ್ ಪಡೆಯಲು ಎಲ್ಲ ಕಡೆಯೂ ಪೈಪೋಟಿ ಇರುತ್ತದೆ. ಕಾಂಗ್ರೆಸ್ ಬಳಿ ಸ್ಪರ್ಧೆಗೆ ಉತ್ತಮ ಅಭ್ಯರ್ಥಿಗಳೇ ಇಲ್ಲ. ಇದರಿಂದ ಹತಾಶರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಳೆದ ಎರಡ್ಮೂರು ದಿನಗಳಿಂದ ನಮ್ಮ ಶಾಸಕರಿಗೆ ಕರೆ ಮಾಡುತ್ತಿದ್ದಾರೆ. ತಮ್ಮ ಪಕ್ಷದ ಟಿಕೆಟ್ ನೀಡುವುದಾಗಿ ಭರವಸೆ ನೀಡುತ್ತಿದ್ದಾರೆ. ಕಾಂಗ್ರೆಸ್ ದಿವಾಳಿಯಾಗಿದೆ ಎಂಬುದಕ್ಕೆ ಇದೇ ಸಾಕ್ಷಿ’ ಎಂದು ತಿರುಗೇಟು ಕೊಟ್ಟರು.
ಇವನ್ನೂ ಓದಿ...
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.