ರಾಮದುರ್ಗ: ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮ 17ನೇ ಬಜೆಟ್ನಲ್ಲಿ ರಾಮದುರ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹ 164 ಕೋಟಿ ಅನುದಾನ ನೀಡಿದ್ದಾರೆ ಎಂದು ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ₹ 30 ಕೋಟಿ ಅನುದಾನದಲ್ಲಿ ರಾಮದುರ್ಗದ ಕುದುರೆ ಬಯಲಿನಲ್ಲಿ ಸುಸಜ್ಜಿತ ಹೊಸ ಬಸ್ನಿಲ್ದಾಣ, ₹ 85 ಕೋಟಿ ವೆಚ್ಚದಲ್ಲಿ ಮಲಪ್ರಭಾ ನದಿಯಿಂದ ತಾಲ್ಲೂಕಿನ ಚಂದರಗಿ, ಮುರಕಟ್ನಾಳ, ತೋರಣಗಟ್ಟಿ, ಕಟಕೋಳ ಸೇರಿದಂತೆ ವಿವಿಧ 8 ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ₹ 40 ಕೋಟಿ ವೆಚ್ಚದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆ ಮಾದರಿಯಲ್ಲಿ ಕಾರ್ಮಿಕರ ಮಕ್ಕಳಿಗಾಗಿ ವಸತಿ ಶಾಲೆ, ₹ 9 ಕೋಟಿ ವೆಚ್ಚದಲ್ಲಿ ಮಲಪ್ರಭಾ ನದಿಗೆ ಗೊಣ್ಣಾಗರ ಗ್ರಾಮದ ಹತ್ತಿರ ಅಗತ್ಯವಿರುವ ಸ್ಥಳದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಸಿದ್ದರಾಮಯ್ಯನವರು ಅನುಮೋದನೆ ನೀಡಿದ್ದಾರೆ.

ಕಳೆದ ಬಜೆಟ್ನಲ್ಲಿ ಅನುಮೋದಿತಗೊಂಡ ₹ 40 ಕೋಟಿ ವೆಚ್ಚದ 100 ಹಾಸಿಗೆಯ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ, ಪುರಸಭೆ ವ್ಯಾಪ್ತಿಯಲ್ಲಿ ₹ 20 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಮುಖ್ಯಮಂತ್ರಿಗಳ ವಿಶೇಷ ಅನುದಾನ ₹ 37 ಕೋಟಿ ಅನುದಾನದಲ್ಲಿ ಪ್ರಮುಖ ರಸ್ತೆಗಳ ಸುಧಾರಣೆ ಮತ್ತು ₹13 ಕೋಟಿ ಅನುದಾನದಲ್ಲಿ ರೈತರ ಜಮೀನುಗಳ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಂಡು ಟೆಂಡರ್ ಪ್ರಕ್ರಿಯೆ ನಡೆಯಲಿದೆ ಎಂದರು.

ಸಾಲಾಪೂರ ಮತ್ತು ಮುದೇನೂರದಲ್ಲಿ 110 ಕೆವಿ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ತಲಾ ರೂ. 25 ಕೋಟಿ ಮಂಜೂರಾಗಿದೆ. ರೈತರ ಬಹು ನಿರೀಕ್ಷಿತ ₹ 350 ಕೋಟಿ ಅನುದಾನದ ವೀರಭದ್ರೇಶ್ವರ ಏತ ನೀರಾವರಿ ಯೋಜನೆ ಮರು ಟೆಂಡರ್ ಕರೆದು ಗುತ್ತಿಗೆ ನೀಡಲು ಸರ್ಕಾರ ಸೂಚಿಸಿದೆ. ಸಾಲಾಪೂರದ ಬಸವೇಶ್ವರ ಏತ ನೀರಾವರಿ ಯೋಜನೆ ಶೇ 90 ರಷ್ಟು ಪೂರ್ಣಗೊಂಡಿದ್ದು ರೈತರು ನೀರಾವರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಮಲಪ್ರಭಾ ನದಿಗೆ ಹಂಪಿಹೊಳಿ ಹತ್ತಿರ ₹ 126 ಕೋಟಿ ವೆಚ್ಚದ ತಡೆಗೋಡೆ ನಿರ್ಮಾಣ ಕಾಮಗಾರಿಯೂ ಸ್ಥಗಿತಗೊಂಡಿತ್ತು ಅದನ್ನು ಸಹ ಪುನಃ ಪ್ರಾರಂಭಿಸಲು ಕ್ರಮಕೈಗೊಳ್ಳಲಾಗಿದೆ. ಶಿರಸಂಗಿಯ 26ನೇ ಹಂಚು ಕಾಲುವೆ ಪುನರ್ ನಿರ್ಮಾಣಕ್ಕೆ ₹ 94 ಕೋಟಿಯ ಪ್ರಸ್ತಾವ ಸಲ್ಲಿಸಲಾಗಿದೆ. ಇದರಿಂದ ಕಡ್ಲಿಕೊಪ್ಪ, ರೇವಡಿಕೊಪ್ಪ, ಜಾಲಿಕಟ್ಟಿ, ಮುಳ್ಳೂರ ಗ್ರಾಮಗಳ ರೈತರ ಜಮೀನಿಗೆ ನೀರಾವರಿಗೆ ಅನುಕೂಲವಾಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಜಿ.ಬಿ.ರಂಗನಗೌಡ್ರ, ಪುರಸಭೆ ಮಾಜಿ ಅಧ್ಯಕ್ಷ ಸುರೇಶ ಪತ್ತೇಪೂರ, ಸಂಜಯಸಿಂಹ ಶಿಂಧೆ, ಪ್ರದೀಪ ಪಟ್ಟಣ, ಪ್ರವೀಣ ನಿಜಗುಲಿ ಸೇರಿದಂತೆ ಹಲವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.