ಸುವರ್ಣ ವಿಧಾನಸೌಧ (ಬೆಳಗಾವಿ): ಬೆಳಗಾವಿ ನಗರಕ್ಕೆ 2.03 ಕಿ.ಮೀ. ಉದ್ದದ ಮೇಲ್ಸೇತುವೆ ನಿರ್ಮಾಣದ ₹275.53 ಕೋಟಿ ವೆಚ್ಚದ ಯೋಜನೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಬೆಳಗಾವಿ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ–48 ರಿಂದ ಧರ್ಮವೀರ ಸಂಭಾಜಿ ವೃತ್ತದವರೆಗೆ ಈ ಮೇಲ್ಸೇತುವೆ ನಿರ್ಮಾಣವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರಮುಖ ತೀರ್ಮಾನಗಳು

* ಬೆಳಗಾವಿ ಜಿಲ್ಲೆ ರಾಯಬಾಗ ಮತ್ತು ಚಿಕ್ಕೋಡಿ ತಾಲ್ಲೂಕು ಅಚ್ಚುಕಟ್ಟು ಪ್ರದೇಶಕ್ಕೆ ಕೃಷ್ಣಾ ನದಿಯಿಂದ ನೀರನ್ನು ಎತ್ತಿ ರಾಯಬಾಗ ವಿತರಣಾ ಕಾಲುವೆ ಮೂಲಕ ನೀರು ಹರಿಸುವ ₹210 ಕೋಟಿ ಮೊತ್ತದ ಏತ ನೀರಾವರಿ ಯೋಜನೆಗೆ ಒಪ್ಪಿಗೆ

* ಬಾಗಲಕೋಟೆ ಜಿಲ್ಲೆ ಬಾದಾಮಿ ಮತ್ತು ಬೀಳಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆರೂರು ಏತ ನೀರಾವರಿ ಯೋಜನೆಯ ₹1,503 ಕೋಟಿ ಪರಿಷ್ಕೃತ ಅಂದಾಜು ವೆಚ್ಚಕ್ಕೆ ಒಪ್ಪಿಗೆ

* ಚಿಕ್ಕೋಡಿ ಶಾಖಾ ಕಾಲುವೆಗೆ ನೀರು ಹರಿಸುವ ₹198.90 ಕೋಟಿ ಅಂದಾಜು ವೆಚ್ಚದ ಶ್ರೀಕರೆಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಅನುಮೋದನೆ

* ಮಧುಗಿರಿ ತಾಲ್ಲೂಕಿನಲ್ಲಿ ಜಿಟಿಟಿಸಿ ಸ್ಥಾಪಿಸಲು ಮತ್ತು ₹73.75 ಕೋಟಿ ವೆಚ್ಚದ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ

* ರಾಯಚೂರು ಜಿಲ್ಲೆ ಮಸ್ಕಿ ತಾಲ್ಲೂಕಿನ ಪಾವಕಲ್ಲೂರು ಮತ್ತು ಇತರೆ ಪ್ರದೇಶಗಳಿಗೆ ನಾರಾಯಣಪುರ ಬಲದಂಡೆ ಕಾಲುವೆಯಿಂದ ನೀರಾವರಿ ಸೌಲಭ್ಯ ಕಲ್ಪಿಸುವ ₹990 ಕೋಟಿ ಮೊತ್ತದ ಯೋಜನೆಗೆ ಅನುಮೋದನೆ

* ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕು ವ್ಯಾಪ್ತಿಯ 19 ಕೆರೆಗಳನ್ನು ತುಂಬಿಸುವ ಯೋಜನೆಯ ₹272 ಕೋಟಿ ವೆಚ್ಚದ ಏತ ನೀರಾವರಿ ಯೋಜನೆಗೆ ಒಪ್ಪಿಗೆ

* ಕರ್ನಾಟಕ ಜಿಲ್ಲಾ ನ್ಯಾಯಾಂಗ ಸುಧಾರಣೆಗಳು ಮಸೂದೆ–2025ಕ್ಕೆ ಅನುಮೋದನೆ ನೀಡಿದ್ದು, ಶುಕ್ರವಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡನೆಯಾಗಲಿದೆ

* ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪಿಪಿಪಿ ಮಾದರಿಯಲ್ಲಿ ಪ್ರತಿ ನಿತ್ಯ 2,250 ಟನ್ಗಳಷ್ಟು, ಕಟ್ಟಡ ಹಾಗೂ ನಿರ್ಮಾಣ ಸಾಮಗ್ರಿಗಳ ಭಗ್ನಾವಶೇಷ ತ್ಯಾಜ್ಯದ ಸಂಗ್ರಹಣೆ ಮತ್ತು ಸಾಗಾಣಿಕೆ ಹಾಗೂ ಸಂಸ್ಕರಣೆ ಮಾಡುವ 750 ಟಿಪಿಡಿಯ ₹1,714.83 ಕೋಟಿ ಮೊತ್ತದ 3 ಪ್ಯಾಕೇಜ್ ಗಳಿಗೆ (15 ವರ್ಷಗಳಿಗೆ) ಅನುಮೋದನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.