ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: 48 ತಾಸುಗಳಲ್ಲಿ ಕೃಷ್ಣಾಗೆ ಹರಿಯಲಿದೆ 2.75 ಲಕ್ಷ ಕ್ಯುಸೆಕ್‌ ನೀರು!

ಪ್ರವಾಹ ಭೀತಿಯಲ್ಲಿ ನದಿ ತೀರದ ಗ್ರಾಮಗಳು
Last Updated 17 ಆಗಸ್ಟ್ 2020, 7:27 IST
ಅಕ್ಷರ ಗಾತ್ರ
ADVERTISEMENT
""
""
""
""

ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಅಲ್ಲಿನ ಜಲಾಶಯಗಳಿಂದ ಅಪಾರ ಪ್ರಮಾಣದ ನೀರು ರಾಜ್ಯಕ್ಕೆ ಹರಿದುಬರುತ್ತಿದೆ.

ಕೊಯ್ನಾ ಜಲಾಶಯದಿಂದ 55,958 ಕ್ಯುಸೆಕ್‌ ಸೇರಿದಂತೆ ವಿವಿಧ ಜಲಾಶಯಗಳಿಂದ ಕೃಷ್ಣಾ ನದಿಗೆ 1.21 ಲಕ್ಷ ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ಮುಂದಿನ 48 ತಾಸುಗಳಲ್ಲಿ ಈ ಪ್ರಮಾಣವು 2.75 ಲಕ್ಷ ಕ್ಯುಸೆಕ್‌ಗೆ ಏರಿಕೆಯಾಗುವ ಸಾಧ್ಯತೆ ಇದೆ. ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಖಾನಾಪುರ ತಾಲ್ಲೂಕಿನ ಶಿವಠಾಣ ಬಳಿ ಪಾಂಡರಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಲೋಂಡಾ–ಹುಬ್ಬಳ್ಳಿ ರೈಲ್ವೆ ಹಳಿ ಪಕ್ಕದಲ್ಲಿ ಭೂ ಕುಸಿತ ಉಂಟಾಗಿದೆ. ನಿರಂತರ ಮಳೆ ಸುರಿಯುತ್ತಿರುವುದರಿಂದ ಪರಿಹಾರ ಕಾರ್ಯದಲ್ಲಿ ಅಡಚಣೆ ಉಂಟಾಗಿದೆ ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಸಾತನಾಳಿ–ಮಾಚಾಳಿ ಗ್ರಾಮಗಳ ಸಂಪರ್ಕ ಕಡಿತ

ಸಂಕದ ಮೇಲೆ ನೀರು; ಸಂಪರ್ಕ ಕಡಿತ

ಜಿಲ್ಲೆಯ ಖಾನಾಪುರ ತಾಲ್ಲೂಕಿನ ಲೋಂಡಾ ಗ್ರಾಮದ ಸಮೀಪದಲ್ಲಿರುವ ಸಾತನಾಳಿ ಗ್ರಾಮಕ್ಕೆ ಸಂಪರ್ಕಿಸುವ ಸಂಕದ ಮೇಲಿಂದ ಪಾಂಡರಿ ನದಿ ಹರಿಯುತ್ತಿದೆ.

ಸಾತನಾಳಿ–ಮಾಚಾಳಿ ಗ್ರಾಮಗಳ ಸಂಪರ್ಕ ಕಡಿತವಾಗಿದೆ.

ತಗ್ಗಿದ ಮಳೆ ರಭಸ; ನದಿ ಪ್ರವಾಹ ಮುಂದುವರಿಕೆ

ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಸೋಮವಾರ ಬೆಳಿಗ್ಗೆಯಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. ಕಳೆದ 3–4 ದಿನಗಳಿಂದ ಸುರಿದ ಬಿರುಸಿನ ಮಳೆಯಿಂದಾಗಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ ನದಿಗಳ ಪ್ರವಾಹ ಮುಂದುವರಿದಿದೆ.

ಗೋಕಾಕ ಹೊರವಲಯದ ಲೊಳಸೂರ ಸೇತುವೆ ಮೇಲೆ ಘಟಪ್ರಭಾ ನೀರು ಹರಿಯುತ್ತಿದೆ

ಕೃಷ್ಣಾ ಪ್ರವಾಹದಿಂದಾಗಿ ರಾಯಬಾಗ–ಕುಡಚಿ ಸೇತುವೆ ಜಲಾವೃತವಾಗಿದೆ. ಘಟಪ್ರಭಾ ಉಕ್ಕಿ ಹರಿಯುತ್ತಿರುವುದರಿಂದ ಗೋಕಾಕ ಹೊರವಲಯದ ಲೋಳಸೂರ ಸೇತುವೆ ಜಲಾವೃತವಾಗಿದೆ. ಮಲಪ್ರಭಾ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಟ್ಟಿದ್ದರ ಪರಿಣಾಮ ಸವದತ್ತಿ ತಾಲ್ಲೂಕಿನ ಮುನವಳ್ಳಿ ಪಟ್ಟಣದಲ್ಲಿ ನೀರು ನುಗ್ಗಿದೆ.


ರಾಯಬಾಗ–ಕುಡಚಿ ಬಳಿಯ ಕೃಷ್ಣಾ ನದಿಯ ಸೇತುವೆ ಸೋಮವಾರ ಬೆಳಿಗ್ಗೆ ಜಲಾವೃತವಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT