ಗುರುವಾರ , ಆಗಸ್ಟ್ 6, 2020
28 °C

ಸಿ.ಎಂ ಸಂತ್ರಸ್ತರ ನಿಧಿಗೆ ₹ 72,000 ಸಂಬಳ ನೀಡಿದ ಶಾಸಕ ಅನಿಲ ಬೆನಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗೆ ನನ್ನ ಎರಡು ತಿಂಗಳ ಸಂಬಳ ₹ 72,000 ನೀಡಿದ್ದೇನೆ’ ಎಂದು ಬೆಳಗಾವಿ ಉತ್ತರ ಶಾಸಕ ಅನಿಲ ಬೆನಕೆ ಹೇಳಿದರು. 

ಇಲ್ಲಿನ ತಮ್ಮ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನನಗೆ ಪ್ರತಿ ತಿಂಗಳು ಸರ್ಕಾರ ₹ 36,000 ಸಂಬಳ ನೀಡುತ್ತದೆ. ಜುಲೈ ಹಾಗೂ ಆಗಸ್ಟ್‌ ಎರಡು ತಿಂಗಳ ಸಂಬಳವನ್ನು ಪರಿಹಾರ ನಿಧಿಗೆ ನೀಡಿದ್ದೇನೆ’ ಎಂದು ತಿಳಿಸಿದರು.

₹100 ಕೋಟಿಗೆ ಮನವಿ: ‘ಬೆಳಗಾವಿಯಲ್ಲಿ ವಾಡಿಕೆ ಮಳೆಗಿಂತ ಎರಡು ಪಟ್ಟುಹೆಚ್ಚು ಮಳೆಯಾಗಿದೆ. ನೂರಾರು ಮನೆಗಳು ಹಾನಿಗೊಳಗಾಗಿವೆ. ರಸ್ತೆಗಳು, ಚರಂಡಿಗಳು ಕೆಟ್ಟುಹೋಗಿವೆ. ಇವುಗಳನ್ನೆಲ್ಲ ದುರಸ್ತಿಪಡಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ₹ 100 ಕೋಟಿ ನೀಡಬೇಕು’ ಎಂದು ಕೋರಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು