ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ: ಕರ್ನಾಟಕ - ಗೋವಾ ರಾಜ್ಯ ಹೆದ್ದಾರಿ ಸಂಚಾರ ಕಡಿತ

ಹೆಮ್ಮಡಗಾ ಸೇತುವೆ ಮುಳುಗಡೆ
Last Updated 14 ಜುಲೈ 2022, 7:18 IST
ಅಕ್ಷರ ಗಾತ್ರ

ಖಾನಾಪುರ (ಬೆಳಗಾವಿ ಜಿಲ್ಲೆ):ತಾಲ್ಲೂಕಿನ ಭೀಮಗಡ ವನ್ಯಧಾಮದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗುರುವಾರ ಸಿಂಧನೂರು- ಹೆಮ್ಮಡಗಾ ರಾಜ್ಯ ಹೆದ್ದಾರಿಯ‌ ಸೇತುವೆ ಮೇಲೆ ನೀರು ಹರಿದಿದೆ. ಇದರಿಂದ ಕರ್ನಾಟಕ- ಗೋವಾ ನಡುವಿನ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ.

ಅನಿವಾರ್ಯವಾಗಿ ಲೋಂಡಾ ಅಥವಾ ಚೂರ್ಲಾ ಮಾರ್ಗಗಳ ಮೂಲಕ ಗೋವಾ ಕಡೆಗೆ ಸಂಚಾರ ಬೆಳೆಸಬೇಕಾಕಿದೆ.

ಗುರುವಾರ ಬೆಳಿಗ್ಗೆಯಿಂದ ಅಲಾತ್ರ ಹಳ್ಳದ‌ ಮೇಲೆ ನಾಲ್ಕು ಅಡಿಗಳಷ್ಟು ನೀರು ಹರಿಯುತ್ತಿದೆ. ಪರಿಣಾಮ ಈ ಹೆದ್ದಾರಿಯಲ್ಲಿ ಮಧ್ಯಾಹ್ನದ ವೇಳೆಗೆ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಕಾವಲು ನೀಡಲಾಗಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT