ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದವರ ಮಾತಿಗೆ ಕಿಮ್ಮತ್ತು ಕೊಡುವ ಅಗತ್ಯವಿಲ್ಲ: ಎಸ್.ಟಿ. ಸೋಮಶೇಖರ್

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹೇಳಿಕೆಗೆ ತಿರುಗೇಟು
Last Updated 18 ನವೆಂಬರ್ 2020, 7:45 IST
ಅಕ್ಷರ ಗಾತ್ರ

ಬೆಳಗಾವಿ: ‘ಬೆಳಗಾವಿ, ಕಾರವಾರ ಹಾಗೂ ನಿಪ್ಪಾಣಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು’ ಎಂಬ ಆ ರಾಜ್ಯದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಗೆಕೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿರುಗೇಟು ನೀಡಿದರು.

‘ಮಹಾರಾಷ್ಟ್ರದವರ ಮಾತಿಗೆ ಕಿಮ್ಮತ್ತು ಕೊಡುವ ಅಗತ್ಯವಿಲ್ಲ. ರಾಜಕೀಯ ದುರುದ್ದೇಶದಿಂದ ಹಾಗೂ ತಮ್ಮ ಬೇಳೆ ಬೇಯಿಸಿಕೊಳ್ಳಲು
ಅವರು ಈ ರೀತಿಯ ಹೇಳಿಕೆಗಳನ್ನು ಆಗಾಗ ನೀಡುತ್ತಿರುತ್ತಾರೆ. ಅದಕ್ಕೆ ಬೆಲೆ ಕೊಡಬೇಕಿಲ್ಲ ಹಾಗೂ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ' ಎಂದರು.

ಈ ಸರ್ಕಾರದಲ್ಲಿ ಗಡಿ ಉಸ್ತುವಾರಿ ಸಚಿವ ನೇಮಕ ಮಾಡಿಲ್ಲವೇಕೆ ಎಂಬ ಪ್ರಶ್ನೆಗೆ, 'ಜಿಲ್ಲೆಯವರೇ ಆದ ನಾಲ್ವರು ಸಚಿವರಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧಾರ ಮಾಡುತ್ತಾರೆ. ಈ ವಿಷಯದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT