ಕರ್ನಾಟಕ– ಮಹಾರಾಷ್ಟ್ರ ‘ಸಮನ್ವಯ’ ಸಭೆ | ಕೊಲ್ಹಾಪುರ ತಲುಪಿದ ರಾಜ್ಯಪಾಲ

ಬೆಳಗಾವಿ: ಕರ್ನಾಟಕ– ಮಹಾರಾಷ್ಟ್ರ ಗಡಿ ಭಾಗದ ಜನಜೀವನ ಸುಧಾರಣೆ ಹಾಗೂ ಮೂಲ ಸಮಸ್ಯೆಗಳ ನಿವಾರಣೆಗೆ ಚರ್ಚಿಸಲು, ಶುಕ್ರವಾರ ಆಯೋಜಿಸಿದ ‘ಸಮನ್ವಯ’ ಸಭೆಯಲ್ಲಿ ಪಾಲ್ಗೊಳ್ಳಲು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಕೊಲ್ಹಾಪುರ ತಲುಪಿದರು.
ಗೆಹಲೋತ್ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರು ಬರಮಾಡಿಕೊಂಡರು. ನಂತರ ಅವರು ಕೊಲ್ಹಾಪುರದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ದೇವಸ್ಥಾನದ ವತಿಯಿಂದ ಗೆಹಲೋತ್ ದಂಪತಿಯನ್ನು ಸನ್ಮಾನಿಸಲಾಯಿತು.
ಈ ಸಭೆಯಲ್ಲಿ ಬೆಳಗಾವಿ, ವಿಜಯಪುರ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕೂಡ ಪಾಲ್ಗೊಂಡಿದ್ದಾರೆ. ಗಡಿ ವಿವಾದದ ಹೊರತಾಗಿ ಈ ಭಾಗದ ಕುಡಿಯುವ ನೀರು, ನೀರಾವರಿ, ರಸ್ತೆ, ಶೈಕ್ಷಣಿಕ ಸಮಸ್ಯೆಗಳ ಚರ್ಚೆ, ಅಪರಾಧ ಕೃತ್ಯಗಳ ನಿಯಂತ್ರಣ ಸಂಬಂಧ ಚರ್ಚೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.